dtvkannada

'; } else { echo "Sorry! You are Blocked from seeing the Ads"; } ?>

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ನಾಲ್ಕು ದಿನಗಳ ಕಾಲ ಬಾಲಕಿ ಮೇಲೆ ಒತ್ತಾಯಪೂರ್ಕವಾಗಿ ಅತ್ಯಾಚಾರ ನಡೆಸಿದ್ದ ಆರೋಪಿಗೆ ಇಪ್ಪತ್ತು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 95 ಸಾವಿರ ದಂಡವನ್ನು ವಿಧಿಸಿ, ಕಲಬುರಗಿಯ ಎರಡನೇ ಅಪರ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯ ಆದೇಶ ಮಾಡಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಮತಿ ಹೇಮಾವತಿ ಅವರು ಆದೇಶ ಹೊರಡಿಸಿದ್ದಾರೆ.

ಸಾಂದರ್ಭಿಕ ಚಿತ್ರ



ಘಟನೆ ವಿವರ:
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿ, ಕಾಲೇಜು ಮುಗಿಸಿಕೊಂಡು ಮರಳಿ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಬಾಲಕಿಯನ್ನು ಆರೋಪಿ ಅಂಬರೀಶ್ ಹೊನ್ನಳ್ಳಿ ಅನ್ನೋ ಯುವಕ ಅಪಹರಿಸಿ ಕೆರದುಕೊಂಡು ಹೋಗಿದ್ದ. ಜೂನ್ 26, 2019 ರಂದು ಬಾಲಕಿಯನ್ನು ಅಪಹರಿಸಿ ಕರೆದುಕೊಂಡು ಹೋಗಿದ್ದ ಯುವಕ ಒತ್ತಾಯಪೂರ್ವಕವಾಗಿ ತನ್ನ ಬೈಕ್ ಮೇಲೆ ಯುವತಿಯನ್ನು ಕರೆದುಕೊಂಡು ಮಹರಾಷ್ಟ್ರದ ಸೊಲ್ಲಾಪುರದಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ. ಅಕ್ರಮವಾಗಿ ಬಂಧನದಲ್ಲಿಟ್ಟದ್ದಲ್ಲದೆ, ನಾಲ್ಕು ದಿನಗಳ ಕಾಲ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ.

ಘಟನೆ ಬಗ್ಗೆ ಬಾಲಕಿಯ ತಂದೆ, ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆಗ ಅಫಜಲಪುರ ಠಾಣೆಯ ಸರ್ಕಲ್ ಇನ್ಸಪೆಕ್ಟರ್ ಮಹಾಂತೇಶ್ ಪಾಟೀಲ್, ತನಿಖೆ ನಡೆಸಿ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 366( ಎ)506, 376(2)(ಐ)(ಎನ್) 342, ಪೋಕ್ಸೋ ಕಾಯ್ದೆಯಡಿ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಧೀಶರಾದ ಶ್ರೀಮತಿ ಹೇಮಾವತಿ ಅವರು, ಪ್ರಕರಣ ಆರೋಪಿಗೆ, ಕಲಂ 366(ಎ) ಅಡಿಯಲ್ಲಿನ ಅಪರಾಧಕ್ಕೆ ಹತ್ತು ವರ್ಷ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಕಲಂ 376(2)(ಐ) (ಎನ್) ಐಪಿಸಿ ಹಾಗೂ ಕಲಂ ಆರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪಿತನಿಗೆ ಇಪ್ಪತ್ತು ವರ್ಷ ಕಠಿಣ ಶಿಕ್ಷೆ ಹಾಗೂ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ. ಕಲಂ 342 ಐಪಿಸಿ ಅಡಿಯಲ್ಲಿನ ಅಪರಾಧಕ್ಕೆ ಒಂದು ವರ್ಷ ಶಿಕ್ಷೆ ಹಾಗೂ ಹತ್ತು ಸಾವಿರ ದಂಡ ವಿಧಿಸಿದೆ. ಕಲಂ 506 ಐಪಿಸಿ ಅಡಿಯಲ್ಲಿನ ಅಪರಾಧಕ್ಕೆ ಎರಡು ವರ್ಷ ಶಿಕ್ಷೆ ಹಾಗೂ ಹತ್ತು ಸಾವಿರ ದಂಡ ವಿಧಿಸಲಾಗಿದೆ.

ನೊಂದ ಬಾಲಕಿಗೆ ಪರಿಹಾರ
ಇನ್ನು ಅತ್ಯಾಚಾರದಿಂದ ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಮೂರು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಆದೇಶ ಮಾಡಲಾಗಿದೆ. ಜೊತೆಗೆ ಆರೋಪಿಗೆ ವಿಧಿಸಿರುವ ದಂಡದ ಮೊತ್ತದಲ್ಲಿ 75 ಸಾವಿರ ರೂಪಾಯಿ ಹಣವನ್ನು ನೊಂದ ಬಾಲಿಕಿಗೆ ನೀಡಲು ಆದೇಶ ಹೊರಡಿಸಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!