dtvkannada

'; } else { echo "Sorry! You are Blocked from seeing the Ads"; } ?>

500 ರೂಪಾಯಿ ವಿಚಾರದಲ್ಲಿ ಸಂಭಂಧಿಸಿ ಸಹಾಯಕ ನರ್ಸ್ ಮತ್ತು ಆಶಾ ಕಾರ್ಯಕರ್ತೆ ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಲಕ್ಷಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಬಿಹಾರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ವಿಡಿಯೋದಲ್ಲಿ, ಜಮುಯಿನ ಲಕ್ಷ್ಮೀಪುರ್ ಬ್ಲಾಕ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹಾಯಕ ನರ್ಸ್ ಮತ್ತು ಆಶಾ ಕಾರ್ಯಕರ್ತೆ ತಲೆಕೂದಲು ಹಿಡಿದುಕೊಂಡು ಎಳೆದಾಡುತ್ತಿದ್ದು, ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಧ್ಯಪ್ರವೇಶಿಸಿ ಜಗಳ ನಿಲ್ಲಿಸಲು ಪ್ರಯತ್ನಿಸುತ್ತಿದ್ದರು. ಆದರೆ ಚಪ್ಪಲಿ ಮತ್ತು ಕೈಗಳಿಂದ ಬಡಿದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಏನಿದು ಜಗಳ?

ಭಾನುವಾರ (ಜನವರಿ 23) ಆಶಾ ಕಾರ್ಯಕರ್ತೆ ರಿಂತು ಕುಮಾರಿ ನವಜಾತ ಶಿಶುವಿಗೆ ಬಿಸಿಜಿ (ಕ್ಷಯರೋಗ ತಡೆಗಟ್ಟುವ ಲಸಿಕೆ) ಲಸಿಕೆ ಹಾಕಿಸಲು, ನರ್ಸ್ ರಂಜನಾ ಕುಮಾರಿ ಅವರ ಬಳಿ ಕೊಂಡೊಯ್ದಿದ್ದರು. ಈ ಸಂದರ್ಭದಲ್ಲಿ ಸಹಾಯಕ ನರ್ಸ್ ರಂಜನಾ ಕುಮಾರಿ ಲಸಿಕೆ ನೀಡಲು 500 ರೂಪಾಯಿ ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರಿಂದ ಇಬ್ಬರು ಹೆರಿಗೆ ವಾರ್ಡ್ ಸಮೀಪ ಹೊಡೆದುಕೊಳ್ಳಲು ಆರಂಭಿಸಿರುವುದಾಗಿ ವರದಿ ತಿಳಿಸಿದೆ.

'; } else { echo "Sorry! You are Blocked from seeing the Ads"; } ?>

ಘಟನೆ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಇಬ್ಬರು ಆಶಾ ಕಾರ್ಯಕರ್ತೆಯರು ಹೊಡೆದಾಡಿಕೊಳ್ಳುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈವರೆಗೂ ಯಾವ ಕ್ರಮ ತೆಗೆದುಕೊಂಡಿಲ್ಲ ಎಂದು ವರದಿ ವಿವರಿಸಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!