ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಹಾಗೂ ವೈರಲ್ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗೆ ತೆರಳಲು 7-8 ಕಿಲೋಮೀಟರ್ ಪ್ರಯಾಣಿಸಬೇಕು. ಗ್ರಾಮದ ಸುತ್ತಲಿನ ಪ್ರದೇಶದಲ್ಲಿ ಯಾವುದೇ ಸುಸಜ್ಜಿತ ಸೌಲಭ್ಯವಿರುವ ಸರಕಾರಿ ಮತ್ತು ಖಾಸಗಿ ಕ್ಲಿನಿಕ್ ಇರುವುದಿಲ್ಲ. ಹಾಗಾಗಿ ತುರ್ತು ಪರಿಸ್ಥಿತಿಗಳಲ್ಲಿ ತುಂಬಾ ತೊಂದರೆಯಾಗುತ್ತದೆ. ಅನೇಕ ಬಾರಿ ಅಪಘಾತಗಳು ಉಂಟಾದಾಗ ದಾರಿ ಮಧ್ಯದಲ್ಲಿಯೇ ಪ್ರಾಣ ಕಳೆದುಕೊಂಡ ಉದಾಹರಣೆ ಕೂಡ ಇವೆ. ಬೆಂಜನಪದವು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗೆ ಸೂಕ್ತ ಚಿಕಿತ್ಸೆ ನೀಡಲು ಬೇಕಾದ ಸೌಲಭ್ಯಗಳು ಮತ್ತು ಯಂತ್ರೋಪಕರಣಗಳು ಇಲ್ಲ. ಅಲ್ಲದೇ ಆಸ್ಪತ್ರೆಗೆ ದಾಖಲಾಗಲು ಬೇಕಾದ ವ್ಯವಸ್ಥೆ ಆಸ್ಪತ್ರೆಯಲ್ಲಿ ಇರುವುದಿಲ್ಲ. ಆದ್ದರಿಂದ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಿ, ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯಗಳನ್ನುಸಕಲ್ಪಿಸಬೇಕಾಗಿ ಅಮ್ಮುಂಜೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಒಂದು ವೇಳೆ ಗರ್ಭಿಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಾಗುವುದಿಲ್ಲ. ಅಪಘಾತ ಸಂಭವಿಸಿದಾಗಲೂ ತುರ್ತು ಚಿಕಿತ್ಸೆ ಲಭಿಸದೇ ಇರುವ ಉದಾಹರಣೆಗಳು ಸಾಕಷ್ಟಿವೆ. ಅಲ್ಲದೇ ಆಸ್ಪತ್ರೆಗೆ ದಾಖಲಾಗಲು ಬೇಕಾದ ಸೂಕ್ತ ಸೌಲಭ್ಯಗಳು ಇಲ್ಲ.

ಆದ್ದರಿಂದ ಆಸ್ಪತ್ರೆಗೆ ದಾಖಲಿಸಲು ಬೇಕಾದ ವ್ಯವಸ್ಥೆಯನ್ನು ಕಲ್ಪಿಸಿ, ಮೇಲ್ದರ್ಜೆಗೆ ಏರಿಸಬೇಕಾಗಿಯೂ ಈ ವಿಷಯವನ್ನು ಸಂಬಂಧ ಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕಾಗಿ ಈ ಮೂಲಕ ಕೋರುತ್ತೇವೆ ಎಂದು ರಮಿತ. ರೈ ಮಂಗಳೂರು ರವರು ಡಿಟಿವಿ ಮಾಧ್ಯಮಕ್ಕೆ ತಿಳಿಸಿದ್ದಾರೆ.


