dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಮದುಮಗನಿಗೆ ಕೊರಗಜ್ಜನ ವೇಷ ಭೂಷಣ ಧರಿಸಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಿಟ್ಲ ಇನ್ಸ್‌ಪೆಕ್ಟರ್ ನಾಗರಾಜ್ ಎಚ್.ನೇತೃತ್ವದ ತಂಡ ಎರ್ನಾಕುಲಂ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣದ ಪ್ರಮುಖ ಆರೋಪಿ ಮದುಮಗ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಭಾಷಿತ್ ಎಂಬಾತನನ್ನು ಪೋಲೀಸರು ಎರ್ನಾಕುಲಂ ಜಿಲ್ಲೆಯ ರೈಲ್ವೆ ನಿಲ್ದಾಣದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

ವಿಟ್ಲ ಪೋಲಿಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಉಳಿದ ಆರೋಪಿಗಳನ್ನು ಈಗಾಗಲೇ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಆರೋಪಿ ಬಂಧನವಾಗದ ಹಿನ್ನೆಲೆಯಲ್ಲಿ ಸಾಕಷ್ಟು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದ್ದ ಪ್ರಕರಣ ಪೋಲಿಸರಿಗೆ ತಲೆನೋವಾಗಿತ್ತು. ಇದೀಗ ಪೋಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ಸುಖಾಂತ್ಯ ಕಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!