dtvkannada

'; } else { echo "Sorry! You are Blocked from seeing the Ads"; } ?>

ಶಿವಮೊಗ್ಗ: ಕರ್ನಾಟಕದಲ್ಲಿ ಹಿಜಾಬ್ ವಿಚಾರ ತಾರಕಕ್ಕೇರಿದ್ದು, ಇಲ್ಲಿನ ಸರಕಾರಿ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಶಾಲಾ ಧ್ವಜ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿ ದೇಶದ್ರೋದದ ಕೃತ್ಯ ಎಸಗಿದ ಘಟನೆ ಇಂದು ಮುಂಜಾನೆ ನಡೆದಿದೆ.

ಕಾಲೇಜು ವಿಜ್ಯಾರ್ಥಿಗಳು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅವಕಾಶ ನೀಡುವದಾದರೆ, ಕೇಸರಿ ಶಾಲು ಹಾಕಿ ಬರಲು ನಮಗೂ ಅವಒಕಾಶ ನೀಡಬೇಕು ಎಂದು ಆಗ್ರಹಸಿ ಕಾಲೇಜು ಮುಂದೆ ಪ್ರತಿಭಟನೆ ಮಾಡುತ್ತಿದ್ದರು. ಪ್ರತಿಭಟನೆ ಕಾವು ಹೆಚ್ಚಾಗಿ ಶಾಲೆಗೆ ಕಲ್ಲು ತೂರಾಟ ಮಾಡಿದ ಘಟನೆಯು ನಡೆದಿದೆ. ಈ ನಡುವೆ ತ್ರಿವರ್ಣ ಧ್ವಜ ಹಾರಿಸುವ ಧ್ವಜಸ್ಥಂಭದ ಮೇಲೆ ಕೇಸರಿ ಧ್ವಜ ಹಾರಿಸಿ ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದ್ದಾರೆ.

'; } else { echo "Sorry! You are Blocked from seeing the Ads"; } ?>

ಶಿವಮೊಗ್ಗದಲ್ಲಿ ನಿಷೇಧಾಜ್ಞೆ:
ಹಿಜಾಬ್-ಕೇಸರಿಶಾಲು ವಿವಾದವನ್ನೇ ನೆಪವಾಗಿ ಇರಿಸಿಕೊಂಡು ಶಿವಮೊಗ್ಗದ ಹಲವೆಡೆ ಪುಂಡರು ಕಲ್ಲುತೂರಾಟ ನಡೆಸಿದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸಿಆರ್​ಪಿಸಿ 144ರ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಮಾಡಿದ್ದಾರೆ.

ನಗರದ ಹಲವೆಡೆ ಕಲ್ಲುತೂರಾಟ ನಡೆದಿದೆಯಾದರೂ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ನಗರದಲ್ಲಿ ಪರಿಸ್ಥಿತಿ ಸದ್ಯ ಹತೋಟಿಯಲ್ಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಹರಿಹರ ಕಾಲೇಜಿನಲ್ಲಿ ವಾಗ್ವಾದ:
ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತೊಟ್ಟ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ, ಹಿಜಾಬ್ ಧರಿಸಿದವರು ವಿ ವಾಂಟ್ ಜಸ್ಟೀಸ್, ಇಸ್ಲಾಂ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದರು.

ವಿದ್ಯಾರ್ಥಿಗಳ ಜೊತೆ ಕಾಲೇಜಿಗೆ ಸಂಬಂಧಿಸದ ಸಾರ್ವಜನಿಕರು ಕೂಡ ಘೋಷಣೆಗಳನ್ನು ಕೂಗಲು ಆರಂಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ತೋರಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!