ದೆಹಲಿ: ಹಿಜಾಬ್ಗಾಗಿ ಮುಸ್ಲಿಂ ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಬರುತ್ತಿದ್ದಾರೆ. ಈ ಹಿಜಾಬ್ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ.
ಇದರಿಂದಾಗಿ ಉಡುಪಿ, ಕುಂದಾಪುರ, ಭದ್ರಾವತಿ, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ.
ಹಿಜಾಬ್ ಧರಿಸಲು ಅನುಮತಿಗೆ ಕೋರಿ ಮುಸ್ಲಿಂ ಯುವತಿಯರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಹಿಜಾಬ್- ಕೇಸರಿ ವಿವಾದ ರಾಜಕೀಯದಲ್ಲೂ ಸಂಚಲನ ಮೂಡಿಸಿದ್ದು, ಟ್ವೀಟ್ ಮೂಲಕ ಅನೇಕರು ಪರ ವಿರೋಧ ವ್ಯಕ್ತಪಡಿಸಿದ್ದಾರೆ. ಸದ್ಯ ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಟ್ವೀಟ್ ಬಳಿಕ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ. ಬಿಕಿನಿಯನ್ನಾದರೂ ಧರಿಸಲಿ, ಹಿಜಾಬನ್ನಾದರೂ ಹಾಕಲಿ ಅದು ಹೆಣ್ಣುಮಕ್ಕಳ ಹಕ್ಕು, ವಿದ್ಯಾರ್ಥಿನಿಯರಿಗೆ ಕಿರುಕುಳ ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.