';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಡುಪಿ: ಕರ್ನಾಟಕದಲ್ಲಿ ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಹಿಜಾಬ್-ಕೇಸರಿ ಶಾಲು ವಿವಾದದಿಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ ಇದಲ್ಲದೆ 12 ಮುಸ್ಲಿಂ ವಿದ್ಯಾರ್ಥಿನಿಯರನ್ನು ಮುಂದಿಟ್ಟುಕೊಂಡು ಜಿಲ್ಲೆಯಲ್ಲಿ ಕೋಮು ಗಲಭೆ ನಡೆಸುತ್ತಿದ್ದಾರೆ.
ಅದೇ ರೀತಿ ಮತೀಯಾವಾದ ಸೃಷ್ಟಿಸಿ,ಅಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ನಿಟ್ಟಿನಲ್ಲಿ, ಇಸ್ಲಾಂ ಸಂಘಟನೆಗಳಾದ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಇಸ್ಲಾಂ ಸಂಘಟನೆಗಳ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಗೆ ಪತ್ರದ ಮೂಲಕ ಒತ್ತಾಯ ಮಾಡಿದ್ದಾರೆಂದು ತಿಳಿದು ಬಂದಿದೆ.