';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಗುಡ್ಡೆಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಪರ್ಲಡ್ಕ ಕ್ರಾಸ್ ಬಳಿ ನಡೆದಿದೆ.
ಇಂದು ಮುಂಜಾನೆ ಯಾರೋ ಕಿಡಿಗೇಡಿಗಳು ಎಸೆದ ಸಿಗರೇಟ್ ಕಿಡಿಯಿಂದ ಬೆಂಕಿ ಹಚ್ಚಿಕೊಂಡಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಾಮಾಜಿಕ ಕಾರ್ಯಕರ್ತ ಅಲಿ ಪರ್ಲಡ್ಕರವರು ಕೂಡಲೇ ಅಗ್ನಿಶಾಮಕದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಸ್ಥಳೀಯ ಸಾರ್ವಜನಿಕರ ಸಹಾಯದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸ್ಥಳದಲ್ಲಿ ಸಾರ್ವಜನಿಕರು ತ್ಯಾಜ್ಯ ವಸ್ತುಗಳನ್ನು ಎಸೆಯುವ ಬಗ್ಗೆ ಇಲ್ಲಿಯ ನಾಗರಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ದರೂ, ಅಧಿಕಾರಿಗಳು ಸ್ಪಂಧನೆ ನೀಡಿಲ್ಲ ಎಂದು ಇಲ್ಲಿನ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರು ಪುರಸಭೆ ಇದರ ಬಗ್ಗೆ ಗಮನವಹಿಸಿ ಸೂಕ್ತ ಕ್ರಮ ಕೈಗಳ್ಳಬೇಕೆಂದು ಸ್ಥಳೀಯ ನಿವಾಸಿಗರು ಆಗ್ರಹಿಸಿದ್ದಾರೆ.