';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಮಸೀದಿಯ ಒಳ ನುಗ್ಗಿ ಅಲ್ಲಿನ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯೋರ್ವನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ತಡರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ.
ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಆತ ರಾತ್ರಿ 10 ಗಂಟೆಯ ಸುಮಾರಿಗೆ ಮಸೀದಿಯ ಬಳಿ ದ್ವಿಚಕ್ರ ವಾಹನವನ್ನಿಟ್ಟು ಅಕ್ರಮವಾಗಿ ಮಸೀದಿಯೊಳಗೆ ನುಗ್ಗಿದ್ದಾನೆ. ಈ ವೇಳೆ ಮಸೀದಿಯ ಗುರುಗಳು ಆತನನ್ನು ವಿಚಾರಿಸಿದಾಗ, ನಾನು ಮಸೀದಿಯ ಗುರುಗಳನ್ನು ಹತ್ಯೆ ಮಾಡಲು ಬಂದಿದ್ದು, ಹತ್ಯೆ ಮಾಡುತ್ತೇನೆ, ನನ್ನನ್ನು ನೀವು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾನೆ.
ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಚಾಕು ಪತ್ತೆಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಬಳಿಕ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>