dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ.

ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ (ಎಸ್ಕಾಂ) ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸೋಮವಾರ ಆದೇಶ ಹೊರಡಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಪ್ರತಿ ಯೂನಿಟ್‌ ಗೆ 5 ಪೈಸೆಗಳಷ್ಟು ಇಂಧನ ಶುಲ್ಕಗಳ ಹಾಗೂ ಪ್ರತಿ ಹೆಚ್.ಪಿ/ಕಿ.ವಾ/ಕೆ.ವಿ.ಎ.ಗೆ ₹10 ರಿಂದ ₹ 30 ರವರೆಗೆ ನಿಗದಿತ ಶುಲ್ಕಗಳ ಹೆಚ್ಚಳವನ್ನು ಅನುಮೋದಿಸಲಾಗಿದೆ. ಇದರೊಂದಿಗೆ ಪ್ರತಿ ಯೂನಿಟ್ ದರ 35 ಪೈಸೆಯಷ್ಟಾಗಿರುತ್ತದೆ (ಶೇ.4.33 ಹೆಚ್ಚಳ) ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 1 ರಿಂದಲೇ ದರ ಏರಿಕೆ ಜಾರಿ ಮಾಡಿರೋದಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!