';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಮಿಂಚಿದ್ದ ಮೋಹನ್ ಜುನೇಜಾ ಇಂದು ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 7) ವಿಧಿವಶರಾಗಿದ್ದಾರೆ.


ಚೆಲ್ಲಾಟ, ನವಗ್ರಹ, ಕೆಜಿಎಫ್, ಗಣೇಶನ ಗಲಾಟೆ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ಅಭಿನಯಿಸಿದ್ದಾರೆ. ಕೆಜಿಎಫ್-2 ಸಿನೆಮಾದಲ್ಲಿ ಒಂದು ಪಾತ್ರ ಮಾಡಿ ಜನಮನ ಗೆದ್ದಿದ್ದರು.
ಅವರ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಜುನೇಜ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.