dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಉಳ್ಳಾಲ ಭಾಗದ ವ್ಯಕ್ತಿಯೋರ್ವ ಮೂಡುಬಿದಿರೆಯ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36) ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಈತ ಮೂಡುಬಿದಿರೆ ನಿವಾಸಿ ಯುವತಿಯೊಬ್ಬಳಿಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದಾನೆಂದು ವರದಿಯಾಗಿದೆ.

ಅಮಲಿನಲ್ಲಿದ್ದ ಮಹಿಳೆಯ ನಗ್ನ ಚಿತ್ರಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ ನಂತರ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ ಆಮಿಷ ಒಡ್ಡಿ ರೂ.1.50 ಲಕ್ಷ ರೂ. ಸುಲಿಗೆ ಮಾಡಿದ್ದನು.

'; } else { echo "Sorry! You are Blocked from seeing the Ads"; } ?>

ಅಷ್ಟೇ ಅಲ್ಲದೆ ಆರೋಪಿಯು ನೊಂದ ಯುವತಿಯನ್ನು ನಗರದ ನಾನಾ ಲಾಡ್ಜ್, ಪುಣೆ, ಮುಂಬಯಿಯ ನಾನಾ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು.

ನೊಂದ ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಿದ್ದು, ಆಕೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ಪಡೆದು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

ಈಕೆ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಕೆಗೊಳ್ಳುವಂತೆ ಕಡತವನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ)ಕ್ಕೆ ವರ್ಗಾಯಿಸಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಸಿಸಿಬಿ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹೆಚ್ಚಿನ ತನಿಖೆಗಾಗಿ ಈತನನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಪೊಲೀಸರು ತನಿಖೆಯಲ್ಲಿ ಆರೋಪಿಯು ಹಲವಾರು ವರ್ಷಗಳಿಂದ ಮಾದಕ ವಸ್ತು ಮಾರಾಟ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

ಈತನ ಮೇಲೆ 2019 ಹಾಗೂ 2020 ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಎರಡು ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!