ಮುಂಬಯಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಉಮ್ರಾನ್ ಮಲಿಕ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಕೆ ಎಲ್ ರಾಹುಲ್ ಅವರು ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ.
ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಉತ್ತಮ ಪ್ರದರ್ಶನ ನೀಡಿದ ದಿನೇಶ್ ಕಾರ್ತಿಕ್ ಟಿ 20 ತಂಡಕ್ಕೆ ಮರಳಿದ್ದಾರೆ. ಐಪಿಎಲ್ 15 ರ ಲೀಗ್ ಹಂತದಲ್ಲಿ ಅತ್ಯುತ್ತಮ ಬೌಲರ್ಗಳಲ್ಲಿ ಒಬ್ಬರಾಗಿದ್ದ ಕುಲದೀಪ್ ಯಾದವ್ ಸ್ವಲ್ಪ ಸಮಯದ ನಂತರ ತಂಡಕ್ಕೆ ಮರಳಿದ್ದಾರೆ
ಈ ಐಪಿಎಲ್ ನಲ್ಲಿ ಉಮ್ರಾನ್ ಮಲಿಕ್ 13 ಪಂದ್ಯಗಳಿಂದ 21 ವಿಕೆಟ್ಗಳನ್ನು ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.
ತಂಡ ಇಂತಿದೆ: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ( ಉಪನಾಯಕ ,ವಿ.ಕೀ) ದಿನೇಶ್ ಕಾರ್ತಿಕ್ (ವಿ.ಕೀ), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ವೈ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ , ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ಪಂದ್ಯದ ವೇಳಾಪಟ್ಟಿ:
ಜೂನ್ 09 ರಂದು ದೆಹಲಿಯಲ್ಲಿ ಸರಣಿಯ ಮೊದಲ ಟಿ 20 ಪಂದ್ಯ ನಡೆಯಲಿದೆ. 12 ರಂದು ಕಟಕ್ ನಲ್ಲಿ 2 ನೇ ಪಂದ್ಯ, 14 ವಿಶಾಖಪಟ್ಟಣಂ ನಲ್ಲಿ ಮೂರನೇ ಪಂದ್ಯ, 17 ರಂದು ರಾಜಕೋಟ್ ನಲ್ಲಿ ನಾಲ್ಕನೇ ಪಂದ್ಯ ಮತ್ತು 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ.
ಇನ್ನು ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕನಾಗಿ ಮುಂದುವರೆಯಲಿದ್ದಾರೆ.
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ ಕೃಷ್ಣ.