dtvkannada

'; } else { echo "Sorry! You are Blocked from seeing the Ads"; } ?>

ಕೋಲ್ಕತ್ತ: ರಜತ್ ಪಾಟಿದಾರ್ ಅಮೋಘ ಶತಕದ (112*) ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪ್ಲೇ-ಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. 
ಇದರೊಂದಿಗೆ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಆಡುತ್ತಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ಟ್ರೋಫಿ ಕನಸು ಭಗ್ನಗೊಂಡಿದೆ. 

ಅತ್ತ ಎರಡನೇ ಕ್ವಾಲಿಫೈಯರ್‌ಗೆ ಲಗ್ಗೆಯಿಟ್ಟಿರುವ ಫಫ್ ಡುಪ್ಲೆಸಿ ನೇತೃತ್ವದ ಆರ್‌ಸಿಬಿ, ಶುಕ್ರವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸವಾಲನ್ನು ಎದುರಿಸಲಿದೆ. 
ಅಲ್ಲಿ ಗೆದ್ದ ತಂಡವು ಭಾನುವಾರ ಅಹಮದಾಬಾದ್‌ನಲ್ಲೇ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಟ್ರೋಫಿಗಾಗಿ ಸೆಣಸಲಿವೆ. 

'; } else { echo "Sorry! You are Blocked from seeing the Ads"; } ?>

ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ಮಳೆಯಿಂದಾಗಿ ವಿಳಂಬಗೊಂಡ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ತಂಡವು ಪಾಟಿದಾರ್ ಹಾಗೂ ದಿನೇಕ್ ಕಾರ್ತಿಕ್ ಅಮೋಘ ಜೊತೆಯಾಟದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 207 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಬಳಿಕ ಕರ್ನಾಟಕದ ಕೆ.ಎಲ್. ರಾಹುಲ್ (79) ದಿಟ್ಟ ಹೋರಾಟದ ಹೊರತಾಗಿಯೂ ಲಖನೌ ಆರು ವಿಕೆಟ್ ನಷ್ಟಕ್ಕೆ 193 ರನ್ ಗಳಿಸಲಷ್ಟೇ ಸಾಧ್ಯವಾಯಿತು.

ಬೃಹತ್ ಮೊತ್ತ ಬೆನ್ನಟ್ಟಿದ ಲಖನೌಗೆ ಮೊದಲ ಓವರ್‌ನಲ್ಲೇ ಮೊಹಮ್ಮದ್ ಸಿರಾಜ್ ಪೆಟ್ಟು ಕೊಟ್ಟರು. ಕ್ವಿಂಟನ್ ಡಿ ಕಾಕ್ 6 ರನ್ ಗಳಿಸಿ ಔಟ್ ಆದರು. ಮನನ್ ವೊಹ್ರಾಗೆ (19) ಜೋಶ್ ಹ್ಯಾಜಲ್‌ವುಡ್ ಪೆವಿಲಿಯನ್ ಹಾದಿ ತೋರಿಸಿದರು. ಈ ಹಂತದಲ್ಲಿ ಜೊತೆ ಸೇರಿದ ನಾಯಕ ಕೆ.ಎಲ್. ರಾಹುಲ್ ಹಾಗೂ ದೀಪಕ್ ಹೂಡ ತಂಡವನ್ನು ಮುನ್ನಡೆಸಿದರು. 10 ಓವರ್ ಅಂತ್ಯಕ್ಕೆ ಲಖನೌ ಎರಡು ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿತು. ಕೊನೆಯ 60 ಎಸೆತಗಳಲ್ಲಿ ಗೆಲುವಿಗೆ 119 ರನ್‌ಗಳ ಅಗತ್ಯವಿತ್ತು.

'; } else { echo "Sorry! You are Blocked from seeing the Ads"; } ?>

ಅತ್ತ ನಾಯಕನ ಆಟವಾಡಿದ ರಾಹುಲ್ 43 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಅಲ್ಲದೆ ದೀಪಕ್ ಜೊತೆಗೆ ಮೂರನೇ ವಿಕೆಟ್‌ಗೆ 96 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. 26 ಎಸೆತಗಳನ್ನು ಎದುರಿಸಿದ ಹೂಡ ನಾಲ್ಕು ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 45 ರನ್ ಗಳಿಸಿದರು. ಹೂಡ ವಿಕೆಟ್ ಗಳಿಸಿದ ವನಿಂದ ಹಸರಂಗ ಎದುರಾಳಿಗಳಿಗೆ ತಿರುಗೇಟು ನೀಡಿದರು.

ಕೊನೆಯ 30 ಎಸೆತಗಳಲ್ಲಿ ಲಖನೌ ಗೆಲುವಿಗೆ 65 ರನ್ ಬೇಕಾಗಿತ್ತು. ಮೈದಾನದ ಎಲ್ಲ ದಿಕ್ಕಿಗೂ ಚೆಂಡನ್ನು ಅಟ್ಟಿದ ರಾಹುಲ್ ಆರ್‌ಸಿಬಿ ಪಾಳಯದಲ್ಲಿ ನಡುಕ ಸೃಷ್ಟಿಸಿದರು.

ಆದರೆ 19ನೇ ಓವರ್‌ನಲ್ಲಿ ರಾಹುಲ್ ಅವರನ್ನು ಜೋಶ್ ಹ್ಯಾಜಲ್‌ವುಡ್ ಔಟ್ ಮಾಡುವುದರೊಂದಿಗೆ ಲಖನೌ ಗೆಲುವಿನ ಕನಸು ಕಮರಿತು. 58 ಎಸೆತಗಳನ್ನು ಎದುರಿಸಿದ ರಾಹುಲ್ ಐದು ಸಿಕ್ಸರ್ ಹಾಗೂ ಮೂರು ಬೌಂಡರಿ ನೆರವಿನಿಂದ 79 ರನ್ ಗಳಿಸಿದರು. 

ಅಂತಿಮವಾಗಿ ಲಖನೌ ಆರು ವಿಕೆಟ್ ನಷ್ಟಕ್ಕೆ 193 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಇನ್ನುಳಿದಂತೆ ಮಾರ್ಕಸ್ ಸ್ಟೋಯಿನಿಸ್ 9, ಎವಿನ್ ಲೂಯಿಸ್ 2, ದುಶ್ಮಂತ ಚಮೀರ 11 ರನ್ ಗಳಿಸಿದರು. 

ಆರ್‌ಸಿಬಿ ಪರ ಹ್ಯಾಜಲ್‌ವುಡ್ ಮೂರು ವಿಕೆಟ್ ಗಳಿಸಿದರು. ಹರ್ಷಲ್ ಪಟೇಲ್ ಒಂದು ವಿಕೆಟ್ ಕಬಳಿಸಿದ್ದರಲ್ಲದೆ 25 ರನ್ ಮಾತ್ರ ಬಿಟ್ಟುಕೊಟ್ಟು ಪರಿಣಾಮಕಾರಿ ಎನಿಸಿಕೊಂಡರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!