dtvkannada

'; } else { echo "Sorry! You are Blocked from seeing the Ads"; } ?>

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾಗಿರುವ ನಾಗೇಶ್(೩೨) ಹಾಗೂ ತೇಜು ಯಾನೇ ತೇಜಸ್ವಿನಿ (೧೪) ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಚಾಲಕ ರವಿ(೩೦), ರಜನಿ(೨೪), ರಂಜಿತ್ (೨೪), ಅಚಿಂತ್ಯಾ(೬) ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ.

'; } else { echo "Sorry! You are Blocked from seeing the Ads"; } ?>

ಇವರೆಲ್ಲಾ ಒಂದೇ ಕುಟುಂಬದವರಾಗಿದ್ದು, ಒಟ್ಟು ಏಳು ಜನ ಹುಂಡೈ ಐ 20 ಕಾರಿನಲ್ಲಿ ರಾಮನಗರದಿಂದ ಸಬ್ರಹ್ಮಣ್ಯಕ್ಕೆ ದೇವರ ದರ್ಶಣಕ್ಕೆ ಬಂದಿದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಿರುಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಒಬ್ಬರು ಪುತ್ತೂರಿನಲ್ಲಿ ಮೃತಪಟ್ಟಿದ್ದಾರೆ.

'; } else { echo "Sorry! You are Blocked from seeing the Ads"; } ?>

ಸ್ಥಳಕ್ಕೆ ಕಡಬ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!