';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕೇರಳದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಕಾರಿನಲ್ಲಿ ಜಾನುವಾರು ಮಾಂಸ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾಧಿಕಾರಿ ತಂಡದ ಪೊಲೀಸರು ತಲಪಾಡಿಯಲ್ಲಿ ಬಂಧಿಸಿದ್ದಾರೆ.
ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಓಮ್ನಿ ಕಾರು ಸಹಿತ 200 ಕೆ.ಜಿ ದನದ ಮಾಂಸ ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.
ಬಂಧಿತರು ಉಪ್ಪಳ ಮೂಸೋಡಿ ಅಡಕ ನಿವಾಸಿ ಮಹಮ್ಮದ್ ನೌಫಾಲ್ ಹಾಗೂ
ಮಂಜೇಶ್ವರ ಹೊಸಬೆಟ್ಟು ನಿವಾಸಿ ಮಹಮ್ಮದ್ ಆಸೀಫ್ ಎಂದು ತಿಳಿದು ಬಂದಿದೆ.
ಇಬ್ಬರು ಮಂಗಳೂರಿನಲ್ಲಿ ಮಾರಾಟ ನಡೆಸಲು ಮಾಂಸವನ್ನು ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ತಲಪಾಡಿ ಬಳಿ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಠಾಣಾಧಿಕಾರಿ ಸಂದೀಪ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆಂದು ವರದಿಯಾಗಿದೆ.