ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ಎರಡು ದಿನ ಶಾಲೆ ಕಾಲೇಜು ಅಂಗನವಾಡಿಗಳಿಗೆ ರಜೆ ನೀಡಿ ದ.ಕ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಬಾರೀ ಮಳೆಗೆ ಕರಾವಳಿ ಜಿಲ್ಲೆಗಳು ಸಂಪೂರ್ಣ ನಡುಗಿ ಹೋಗಿದ್ದು ಹಲವೆಡೆ ಹಾನಿ ನಷ್ಟಗಳು ಸಂಭವಿಸಿವೆ.
ಮುಂಜಾಗೃತಾ ಕ್ರಮವಾಗಿ ಜುಲೈ 8 ಮತ್ತು 9 ರಂದು ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇದೀಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು.
ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜನರು ಹೈರಾಣಾಗಿದ್ದಾರೆ . ಮುಂದಿನ 48 ಗಂಟೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯನ್ನು ಹೈ ಅಲರ್ಟ್ ಮಾಡಲಾಗಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮುಂದಿನ 2ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ . ಮಾತ್ರವಲ್ಲ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸರಕಾರಿ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 08 ಮತ್ತು 09 ರಂದು ರಜೆ ಘೋಷಣೆ ಮಾಡಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ .