';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸುಳ್ಯ: ಹಿಂದೂ ಮುಖಂಡ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದು ಇದೀಗ 9 ರ ಹೊತ್ತಿಗೆ ಬೆಳ್ಳಾರೆ ಸಮೀಪ ನಡೆದಿದೆ.
ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ರವರ ಮೇಲೆ ತಲವಾರು ದಾಳಿ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.
ಮೃತಪಟ್ಟ ಯುವಕ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (32) ಎಂದು ತಿಳಿದು ಬಂದಿದೆ.
ಕಳೆದ ಐದು ದಿನಗಳ ಹಿಂದೆ ಬೆಳ್ಳಾರೆಯಲ್ಲಿ ಮಸೂದ್ ಎಂಬ ಅಮಾಯಕನನ್ನು ಬಜರಂಗದಳದ ಕಾರ್ಯಕರ್ತರು ಹತ್ಯೆ ನಡೆಸಿದ್ದರು ಇದೀಗ ಅದರ ವಿರುದ್ದವಾಗಿ ಈ ಹತ್ಯೆ ನಡೆದಿರಬಹುದೇ ಎಂದು ಸಾರ್ವಜನಿಕ ವಲಯದಲ್ಲಿ ಊಹಾಪೋಹಗಳು ಕೇಳಿಬರುತ್ತಿವೆ.
ನಿರಂತರವಾಗಿ ನಡೆದ ಎರಡು ಹತ್ಯೆಗಳ ಬೆನ್ನಲ್ಲೇ ಪೊಲೀಸರು ಎಚ್ಚೆತ್ತಿದ್ದು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳ್ಳಾರೆ ಸುಳ್ಯ ದಲ್ಲಿ ಅಂಗಡಿ ಮುಗ್ಗಟುಗಳನ್ನು ಪೊಲೀಸರು ಬಂದ್ ಮಾಡಿಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.