ಸುರತ್ಕಲ್: ಮುಸ್ಲಿಂ ಯುವಕನೊಬ್ಬನಿಗೆ ಚೂರಿ ಇರಿದ ಘಟನೆ ಸುರತ್ಕಲ್ ನಲ್ಲಿ ಇದೀಗ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತಪಟ್ಟ ಯುವಕನನ್ನು ಮಂಗಳಪೇಟೆ ನಿವಾಸಿ ಮಾಝಿನ್ (30) ಎಂದು ಗುರುತಿಸಲಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು, ಕರಾವಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಚಪ್ಪಲಿ ಖರೀದಿಗೆ ಬಂದಿದ್ದ ಯುವಕನ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ.
ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.