';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.
ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್ ಗಾಗಿ ಬಂದಿದ್ದಾರೆ ಎನ್ನಲಾಗಿದೆ.
ನವ ವಿವಾಹಿತ ಅನ್ಯಕೋಮಿನ ಜೋಡಿ ಎಂದು ತಿಳಿಯುತ್ತಲೇ ಲಾಡ್ಜ್ ಸಿಬ್ಬಂದಿ ರೂಮ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ತಕ್ಷಣ ಅವರಿಬ್ಬರು ಅಲ್ಲಿಂದ ಬೆಂಗಳೂರು ಕಡೆಗೆ ತೆರಳಲು ಬಸ್ ಹತ್ತಿದ್ದಾರೆ. ಈ ಬಗ್ಗೆ ವಿಷಯ ತಿಳಿದ ಕಾರ್ಯಕರ್ತರು ಕೊಕ್ಕಡದಲ್ಲಿ ಅಡ್ಡಗಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.
ತದನಂತರ ಅನ್ಯಕೋಮಿನ ಜೋಡಿಯನ್ನು ಕಾರ್ಯಕರ್ತರು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದು, ಯುವತಿಯು ವಿದ್ಯಾಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು ಎನ್ನಲಾಗುತ್ತಿದೆ.
ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.