ಬೆಳ್ತಂಗಡಿ: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ಸಮೀಪದ ನಡಿಬೆಟ್ಟು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಶಿವಪ್ರಸಾದ್(19) ಎಂದು ಗುರುತಿಸಲಾಗಿದೆ.
ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರವ ಪ್ರಸಾದ್
ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ನಡೆದ ಅಪಘಾತದಲ್ಲಿ ತೀವೃ ಗಾಯಗಳಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ನಿನ್ನೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾರೆ.