ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿರುವ ಶಂಕಿತ ವ್ಯಕ್ತಿ ಮೊಹಮ್ಮದ್ ಶಾರೀಕ್ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದ್ದು, ವಿಚಾರಣೆ ತೀವ್ರಗೊಳಿಸಲು ಪೊಲೀಸರು ವೈದ್ಯರ ಅನುಮತಿಗಾಗಿ ಕಾಯುತ್ತಿದ್ದಾರೆ.
ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿದ್ದು ಇದೀಗ ಚಿಕಿತ್ಸೆಯಲ್ಲಿ ತುಸು ಚೇತರಿಸಿಕೊಂಡಿದ್ದು, ತನಿಖಾಧಿಕಾರಿಗಳು ತನಿಖೆಗೆ ಸಿದ್ಧತೆ ನಡೆಸಿದ್ದಾರೆ.
ಇನ್ನು ಒಂದೆರಡು ದಿನಗಳಲ್ಲಿ ಎನ್‌ಐಎ ತನಿಖೆ ಕೈಗೆತ್ತಿಕೊಳ್ಳಲಿದ್ದು ಇದರಿಂದ ಆತನ ಉದ್ದೇಶ, ಹಿಂದಿರುವ ಶಕ್ತಿಗಳ ಸಂಪೂರ್ಣ ಚಿತ್ರಣ ಸಿಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.
ಇನ್ನು ಆತನಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಒಳಗೂ – ಹೊರಗೂ ಬಿಗಿ ಭದ್ರತೆ ಒದಗಿಸಲಾಗಿದೆ.
ಹ್ಯಾಂಡ್ಲರ್ಸ್, ಫೀಪರ್ ಸೆಲ್‌ಗಳನ್ನು ಅಕ್ಟಿವ್ ಮಾಡಿ ದಾಳಿ ನಡೆಸುವ ಶಂಕೆ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಶಾರೀಕ್ ಇರುವ ವಾರ್ಡ್ ಬಳಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಒಬ್ಬ ಇನ್ಸ್‌ಪೆಕ್ಟರ್, ಓರ್ವ PSI, ASI ಭದ್ರತೆಗೆ ನಿಯೋಜನೆ ಮಾಡಲಾಗಿದೆಯೆಂದು ತಿಳಿದು ಬಂದಿದೆ.