ಬೆಳ್ತಂಗಡಿ: ಸ್ನೇಹಿತರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಹೇಳಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ್ಡಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಇಂದು ಪತ್ತೆಯಾಗಿದೆ.

ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ ಎಂದ ವ್ಯಕ್ತಿಯು ಆಟೋ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದೆ.
ಈತನು ಇಂದು ಮುಂಜಾನೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದು ಆ ಕೂಡಲೇ ಸ್ನೇಹಿತರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದು ಪತ್ತೆಯಾಗಿರಲಿಲ್ಲ..
ತದನಂತರ ಹುಡುಕಾಟದಲ್ಲಿದ್ದವರಿಗೆ ಗುರುವಾಯನಕೆರೆ ಬಳಿ ಇರುವ ಕೆರೆಯ ಬಳಿ ಪ್ರವೀಣ್ರಿಗೆ ಸೇರಿದ ಕೆಲವು ದಾಖಲೆಗಳು ಪತ್ತೆಯಾಗಿದ್ದವು.

ಇದರಿಂದಾಗಿ ಕೆರೆಗೆ ಹಾರಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಮಧ್ಯಾಹ್ನ ವೇಳೆ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ.
ಒಟ್ಟು ಘಟನೆಯ ಬಗ್ಗೆ ಹಲವಾರು ಅನುಮಾನಗಳಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.