';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಫೆ.18 ರಂದು ಮಧ್ಯಾಹ್ನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಎಂಬಾತ ಚೂರಿ ಇರಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ನಿಸಾರ್ ಕೂಡ ನೆಹರು ನಗರ ನಿವಾಸಿಯಾಗಿದ್ದಾನೆ. ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರು ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಶಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ.
ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಭೇಟಿ ನೀಡಿದ್ದಾರೆ.
ಆರೋಪಿ ನಿಸಾರ್ ನನ್ನು ಬಂಧಿಸಲು ಪೋಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.