dtvkannada

'; } else { echo "Sorry! You are Blocked from seeing the Ads"; } ?>

ಉಳ್ಳಾಲ: ಬಾಡಿಗೆ ಮನೆಯಲ್ಲಿದ್ದುಕೊಂಡು ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು, ಮತ್ತೋರ್ವ ಪಿಂಪ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ.

ಬಂಧಿತ ಮಹಿಳೆಯನ್ನು ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ರುಕಿಯಾ (50) ಎಂದು ತಿಳಿದು ಬಂದಿದೆ.

ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾ ವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್,ಉಪನಿರೀಕ್ಷಕರಾದ ಮಂಜುಳಾ.ಎಲ್ ನೇತೃತ್ವದಲ್ಲಿ ನಿನ್ನೆ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ.

ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ. ಪ್ರಮುಖ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು,9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಎನ್, ದಾಕ್ಷಾಯಿಣಿ,ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!