dtvkannada

'; } else { echo "Sorry! You are Blocked from seeing the Ads"; } ?>

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ(61) ತೀವ್ರ ರಕ್ತ ಸ್ರಾವದಿಂದ ನಿಧನರಾಗಿದ್ದಾರೆ. ಆರ್.ಧ್ರುವನಾರಾಯಣ ಅವರಿಗೆ ಶನಿವಾರ (ಮಾ.11) ಬೆಳಗ್ಗೆ 6.30ರ ವೇಳೆಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಡ್ರೈವರ್​ಗೆ ಕರೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರ್​.ಧ್ರುವನಾರಾಯಣ ತೀವ್ರ ರಕ್ತಸ್ರಾವ ಆಗಿ ಮೃತಪಟ್ಟಿದ್ದಾರೆ ಎಂದು ಧ್ರುವನಾರಾಯಣಗೆ ಚಿಕಿತ್ಸೆ ನೀಡಿದ ವೈದ್ಯ ಮಂಜುನಾಥ್ ಹೇಳಿದ್ದಾರೆ. ನಾವು ನೋಡಿದಾಗ ಧ್ರುವನಾರಾಯಣ ಕೋಮಾ ಸ್ಥಿತಿಯಲ್ಲಿದ್ದರು ಎಂದು ತಿಳಿಸಿದ್ದಾರೆ. ನಾಳೆ (ಮಾ.12) ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಧ್ರುವನಾರಾಯಣ ಅಂತ್ಯಕ್ರಿಯೆ ನಡೆಯಲಿದೆ.

1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಇವರು 1986ರಲ್ಲಿ ಎನ್​ಎಸ್​ಯುಐ ಬೆಂಗಳೂರು​ ಘಟಕದ ಅಧ್ಯಕ್ಷರಾಗಿದ್ದರು. ಚಾರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೇ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು.

'; } else { echo "Sorry! You are Blocked from seeing the Ads"; } ?>

ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನ ಹಿನ್ನಲೆ ಕಾಂಗ್ರೆಸ್ ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ. ಮತ್ತೊಂದೆಡೆ ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

ಧ್ರುವನಾರಾಯಣ ಅವರ ಸಾವಿಗೆ ಸಂತಾಪ ಸೂಚಿಸಿದ ಸಿಎಂ

'; } else { echo "Sorry! You are Blocked from seeing the Ads"; } ?>

ಧ್ರುವನಾರಾಯಣ ಅವರು ತುಂಬಾ ಕ್ರೀಯಾಶೀಲರಾಗಿರುತ್ತಿದ್ದರು. ಅವರು ಹೃದಯಘಾತದಿಂದ ನಿಧನ ಹೊಂದಿರುವುದು ಆಘಾತವಾಗಿದೆ. ಚಾಮರಾಜನಗರ ಭಾಗದಲ್ಲಿ ತುಂಬಾ ಚಟುವಟಿಕೆಯಿಂದ ಕೆಲಸ ಮಾಡಿಕೊಂಡಿದ್ರು. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಗುವುದು ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!