dtvkannada

'; } else { echo "Sorry! You are Blocked from seeing the Ads"; } ?>

ಮಂಡ್ಯ: ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಲೋಕಾರ್ಪಣೆ ಮಾಡಿದ್ದಾರೆ.

8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಿದೆ. ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ ಸ್ವಾಗತ ಕೋರಲಾಯಿತು. ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ನಂತರ ಮಾತನಾಡಿದ ಮೋದಿ ಕರ್ನಾಟಕದಾದ್ಯಂತ ಸಂಪರ್ಕವನ್ನು ಹೆಚ್ಚಿಸುವ ಪ್ರಮುಖ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಇಲ್ಲಿಂದ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.

'; } else { echo "Sorry! You are Blocked from seeing the Ads"; } ?>

ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಮ್ಮ ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ. ಈ ಎಲ್ಲಾ ಯೋಜನೆಗಳು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಗಳನ್ನು ತೆರೆಯುತ್ತದೆ ಎಂದು ಮೋದಿ ಹೇಳಿದ್ದಾರೆ

— Narendra Modi (@narendramodi) March 12, 2023
Video

ವೀಡಿಯೋ ನೋಡಿ

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!