ಉಳ್ಳಾಲ: ಮಹಿಳೆಯೊರ್ವಳನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ಇಂದು ಸಂಜೆ ವೇಳೆ ಬೆಳಕಿಗೆ ಬಂದಿದೆ.

ಹತ್ಯೆಯಾದ ಮಹಿಳೆಯನ್ನು ದೆಹಲಿ ಮೂಲದ 35-40 ಪ್ರಾಯದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈಕೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆಂದು ತಿಳಿದು ಬಂದಿದೆ.
ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್ ಎಂಬವರಿಂದ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು.

ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂಬ ಮಾಹಿತಿಯನ್ನು ನೀಡಿ ಮನೆಯಲ್ಲಿದ್ದರೆಂದು ತಿಳಿದುಬಂದಿದೆ.
ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಗೆ ಮಹಿಳೆ ಮೃತದೇಹ ಚೂರಿಯಿಂದ ಇರಿದು ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದ್ದು ಪೊಲೀಸರು ದೌಡಾಯಿಸಿದ್ದಾರೆಂದು ತಿಳಿದು ಬಂದಿದೆ.