dtvkannada

'; } else { echo "Sorry! You are Blocked from seeing the Ads"; } ?>

ಯಾದಗಿರಿ: ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ.

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲಾ ಶ್ರೀ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಇಂದು (ಮಾರ್ಚ್ 17) ಯಾದಗಿರಿಯ ಸಿವಿಲ್ ಕೋರ್ಟ್ ನ್ಯಾಯಾಧೀಶ ರವೀಂದ್ರ ಹೊನೋಲೆ​ ಅವರು, ಸಿದ್ದಲಿಂಗ ಸ್ವಾಮಿಯನ್ನು ದೋಷಿ ಎಂದು ತೀರ್ಪು ನೀಡಿದರು.
ಅಲ್ಲದೇ ದೋಷಿಯ ಹಿನ್ನಲೆಯ ವರದಿ ನೀಡುವಂತೆ ಪ್ರೊಬೇಷನರಿ ಅಧಿಕಾರಿಗಳಿಗೆ ತಿಳಿಸಿದ್ದು, ವರದಿ ಮೇಲೆ ಶಿಕ್ಷೆಯ ಪ್ರಮಾಣ ನಿರ್ಧಾರವಾಗಲಿದೆ.

'; } else { echo "Sorry! You are Blocked from seeing the Ads"; } ?>

2015ರ ಜನವರಿ 2ರಂದು ಯಾದಗಿರಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿದ್ದರು. ಈ ಬಗ್ಗೆ ಯಾದಗಿರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗಿಸಿಕೊಂಡಿದ್ದ ಯಾದಗಿರಿ ನಗರ ಠಾಣೆ ಪೊಲೀಸರು ಐಪಿಸಿ ಕಲಂ 153 (ಎ), 295ರ ಅಡಿಯಲ್ಲಿ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!