ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಪ್ರಸಾದ್ ಪಾಣಾಜೆರವರು ಇದೀಗ ರಾಜ್ಯ ಯುವ ಕಾಂಗ್ರೆಸ್ ವಕ್ತಾರರಾಗಿ ನೇಮಕಗೊಂಡಿದ್ದಾರೆ.

ಪುತ್ತೂರು ತಾಲೂಕಿನ ಪಾಣಾಜೆಯ ನಡುಗಟ್ಟ ನಿವಾಸಿಯಾಗಿರುವ ಶ್ರೀಪ್ರಸಾದ್ ಅವರು ಖಾಸಗಿ ಶಾಲೆಯಲ್ಲಿ 8 ವರ್ಷಗಳ ಕಾಲ ಶಿಕ್ಷಕ ವೃತ್ತಿ ಮಾಡಿದ್ದು ಬಳಿಕ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು. ಇದೀಗ ಕರ್ನಾಟಕ ಪ್ರದೇಶ ಯವ ಕಾಂಗ್ರೆಸ್ ಸಮಿತಿಯ ರಾಜ್ಯ ವಕ್ತಾರರಾಗಿ ಇವರನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ನೇಮಕ ಮಾಡಿ ಆದೇಶಿಸಿದ್ದಾರೆ.

ಶ್ರೀಪ್ರಸಾದ್ ಅವರು ಪಾಣಾಜೆ ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ, ವಿದ್ಯಾಶ್ರೀ ಚಾರಿಟೇಬಲ್ ಟ್ರಸ್ಟ್ ಸಂಚಾಲಕರಾಗಿ, ಯಾದವ ಸಭಾ ತಾಲೂಕು ಸಮಿತಿಯು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಯಂಗ್ ಇಂಡಿಯಾ ಕೆ ಬೊಲೋ ಕಾರ್ಯಕ್ರಮದಲ್ಲಿ ತನ್ನ ಭಾಷಣದ ಮೂಲಕ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಮನಗೆದ್ದಿದ್ದು ಹಲವು ನಾಯಕರಿಂದ ಪ್ರಶಂಸೆಗೆ ಪಾತ್ರರಾಗಿದ್ದರು.
