ಬೆಂಗಳೂರು: ಒಂದು ಸಮಯದಲ್ಲಿ ತಮ್ಮದೇ ಹವಾ ನಿರ್ಮಿಸಿ ತಮ್ಮದೇ ಶೈಲಿಯಲ್ಲಿ ಅಧಿಕಾರವನ್ನು ನಿರ್ವಹಿಸುತ್ತಾ ಎಲ್ಲರ ಮನಗೆದ್ದಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಅವರ ಅಶ್ಲೀಲ ಚಿತ್ರಗಳನ್ನು ಪಸರಿಸಿದ್ದ ಪ್ರಕರಣದ ಬಗ್ಗೆ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗೀಲ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ ಸಿ ಚಂದ್ರಶೇಖರ್ ಅವರು ಐಪಿಸಿ ಸೆಕ್ಷನ್ 500ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ ಮಾಡಿದ್ದು, “ಆರೋಪಿ ರೂಪಾ ಅವರ ವಿರುದ್ಧ ಪ್ರಕ್ರಿಯೆ ಮುಂದುವರಿಸಲು ಸಾಕಷ್ಟು ದಾಖಲೆಗಳು ಇವೆ. ಹೀಗಾಗಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಪ್ರಕ್ರಿಯೆ ಮುಂದುವರಿಸುವುದು ಅಗತ್ಯ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಡಿ.ರೂಪಾ ಮೌದ್ಗೀಲ್ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ.
ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದ್ದು ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾರ್ಚ್ 3ರಂದು ಖಾಸಗಿ ದೂರು ದಾಖಲಿಸಿದ್ದರು.
ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತೆ ಉಂಟು ಮಾಡಿರುವುದಕ್ಕಾಗಿ ಡಿ ರೂಪಾ ಅವರಿಂದ ಒಂದು ಕೋಟಿ ರುಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು ಮತ್ತು ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು.ಇದೀಗ ರೂಹಿಣಿ ಸಿಂದೂರಿಗೆ ನ್ಯಾಯಾಲಯವು ನ್ಯಾಯ ನೀಡುವ ಮೂಲಕ ಅತೀ ಹೆಚ್ಚು ವೈರಲ್ ಆಗಿದ್ದ ಈ ಪ್ರಕರಣದಲ್ಲಿ ರೂಹಿಣಿಯವರಿಗೆ ಜಯ ಸಿಕ್ಕಿದೆ ಎನ್ನಬಹುದು.