dtvkannada

'; } else { echo "Sorry! You are Blocked from seeing the Ads"; } ?>

ಮೈಸೂರು: ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಂದ್ರು ಎಂಬಾತ ತನ್ನ ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಶಿವಮ್ಮಗೆ ಎರಡು ಹೆಣ್ಣು ಮಕ್ಕಳಿದ್ದು ಗಂಡು ಮಗು ಬೇಕು ಎಂದು ಕಿರುಕುಳ ನೀಡಲಾಗುತ್ತಿತ್ತು.

'; } else { echo "Sorry! You are Blocked from seeing the Ads"; } ?>

ಇದೇ ಕಾರಣಕ್ಕಾಗಿ ಪ್ರತಿ ನಿತ್ಯ ಪತಿ ಮತ್ತು ಕುಟುಂಬಸ್ಥರು ಮಾನಸಿಕ ಹಿಂಸೆ ನೀಡುತ್ತಿದ್ದರು. ಈ ಬಗ್ಗೆ ಹಲವು ಭಾರಿ ನ್ಯಾಯ ಪಂಚಾಯತಿ ಕೂಡ ಆಗಿದೆ. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ.

ಕಿರುಕುಳ ತಾಳಲಾರದೆ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ಶಿವಮ್ಮ ದೂರು ನೀಡಿದ್ದರು. ಸದ್ಯ ಪತಿ ಚಂದ್ರು ಬಂಧನವಾಗಿದ್ದು ಮಾವ ರಾಮೇಗೌಡ, ಅತ್ತೆ ಕೆಂಪಮ್ಮ ತಲೆ ಮರೆಸಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!