dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ ಸುಳ್ಯ ಪಿಎಫ್ಐ (PFI) ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದ್ದು, ಈ ಬಗ್ಗೆ ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಆರ್ಡರ್ ಕಾಪಿ ರವಾನೆ ಮಾಡಲಾಗಿದೆ.

'; } else { echo "Sorry! You are Blocked from seeing the Ads"; } ?>

ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಸುಳ್ಯ ಪಿಎಫ್​ಐ ಕಚೇರಿ ಇದ್ದ ಜಾಗವನ್ನು ಪರಾಬಾರೆ ಮಾಡುವಂತಿಲ್ಲ. ಬಾಡಿಗೆ, ಲೀಜ್ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ಪ್ರಾಪರ್ಟಿ ಸಾಗಿಸುವುದು ಅಥವಾ ನವೀಕರಣ ಮಾಡುವುದು ನಿಷಿದ್ಧವಾಗಿದೆ.

ಪ್ರವೀಣ್ ನೆಟ್ಟಾರು ಕೊಲೆ ಸಂಚನ್ನು ಇದೇ ಕಚೇರಿಯಲ್ಲಿ ಮಾಡಲಾಗಿತ್ತು ಎಂದು NIA ಅಧಿಕೃತ ಮೂಲ ಮಾಹಿತಿ ತಿಳಿಸಿದೆ.

'; } else { echo "Sorry! You are Blocked from seeing the Ads"; } ?>

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:
ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು.
ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದರು. ಘಟನೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!