dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿ ಕಕ್ಯೆಪದವಿನಲ್ಲಿ ಇಂದು ಸಂಜೆ ನಡೆದಿದೆ.

ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಪಯಾಝ್(22) ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಮೃತ ಫಯಾಝ್ ಕೆಲಸಕ್ಕೆಂದು ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಸವಾರ ರಸ್ತೆಗೆಸಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮಾನವೀಯತೆ ಮೆರೆದ ಸ್ಥಳೀಯ ಹಿಂದೂ ಯುವಕರು:
ಅಪಘಾತದ ಸಂಭವಿಸಿದ ತಕ್ಷಣ ಅದೇ ಊರಿನ ಹಿಂದೂ ಭಾಂದವರು ಆಗಮಿಸಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಆಂಬ್ಯೂಲೆನ್ಸ್ ಮೂಲಕ ಆಸ್ಪತ್ರಗೆ ಸಾಗಿಸುವಲ್ಲಿ ನೆರವಾಗಿದ್ದಾರೆ. ಆದರೆ ಅದಾಗಲೇ ಪಯಾಝ್’ನ ಪ್ರಾಣಪಕ್ಷಿ ಹಾರಿತ್ತು ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಮೃತ ಯುವಕ ತಂದೆ-ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಪುಂಜಲಕಟ್ಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!