dtvkannada

ಉಳ್ಳಾಲ: ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡಗಟ್ಟಿ ಕೈಯಲ್ಲಿದ್ದ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಬಂಧಿತ ಆರೋಪಿಗಳು ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಮಹಮ್ಮದ್ ಉಬೈದುಲ್ಲಾ ಅಲಿಯಾಸ್ ಉಬ್ಬಿ(33), ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಎಂದು ತಿಳಿದು ಬಂದಿದೆ.

ಘಟನೆ ವಿವರ: ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ ಮತ್ತು ಯುವತಿ ಬೈಕಲ್ಲಿ ಜತೆಯಾಗಿ ತೆರಳುತ್ತಿದ್ದ ವೇಳೆ ಎರಡು ಸ್ಕೂಟರಲ್ಲಿ ಬಂದ ಮೂವರು ಖದೀಮರು ಅಡ್ಡಗಟ್ಟಿ ಯುವತಿಯ ಕೈಯಲ್ಲಿದ್ದ ಬೆಲೆ ಬಾಳುವ ಐ-ಫೋನ್ ಸುಲಿಗೆ ಮಾಡಿದ್ದಲ್ಲದೆ ಮೋಟಾರು ಬೈಕನ್ನೂ ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್, ಸುಲಿಗೆ ನಡೆಸಿದ್ದ ಐಫೋನ್, ಯಮಹಾ ಮೋಟಾರು ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಆರೋಪಿಗಳನ್ನು ನಾಯಾಲಯಕ್ಕೆ ಹಾಜರುಪಡಿಸಲಾಗಿದೆಯೆಂದು ವರದಿಯಾಗಿದೆ. ಈ ಒಂದು ಪ್ರಕರಣವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್ ಮಾರ್ಗದರ್ಶನದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಮತ್ತು ಉಪನಿರೀಕ್ಷಕರುಗಳಾದ ಶ್ರೀ ಕೃಷ್ಣ ಕೆ.ಹೆಚ್, ಸಂತೋಷ್ ಮತ್ತು ಪಿಸಿಗಳಾದ ಪ್ರವೀಣ ಶೆಟ್ಟಿ, ಅಶೋಕ್,ವಾಸುದೇವ ಸಿಬ್ಬಂದಿಗಳ ತಂಡ ಪ್ರಕರಣವನ್ನು ಶೀಘ್ರದಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!