dtvkannada

'; } else { echo "Sorry! You are Blocked from seeing the Ads"; } ?>

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.

'; } else { echo "Sorry! You are Blocked from seeing the Ads"; } ?>

ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು.
ಈ ಸಂದರ್ಭ ದೈವ ನರ್ತನ ಮಾಡುತ್ತಿದ್ದ ಅಜಿಲ ರವರು ಏಕಾಏಕಿ ಕುಸಿದು ಬಿದ್ದಿದ್ದಾರೆ.
ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡದೇ ಇಹಲೋಕ ತ್ಯಜಿಸಿದ್ದಾರೆ.ವೀಡಿಯೋ ನೋಡಿ

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!