dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆಯೇ ಸಾಕ್ಷಿ ಎಂದು ಗೋ ರಕ್ಷಕರ ಕೈಯಿಂದ ಹತ್ಯೆಗೊಳಗಾದ ಇದ್ರಿಸ್ ರವರ ಹತ್ಯೆಯನ್ನು ಖಂಡಿಸಿ ಸಿದ್ದರಾಮಯ್ಯ ಮಾಧ್ಯಮಕ್ಕೆ ತಿಳಿಸಿದರು .

ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು.
ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ.

ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು

ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ.
ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ.
ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು.

'; } else { echo "Sorry! You are Blocked from seeing the Ads"; } ?>

ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

— Karnataka Congress (@INCKarnataka) April 2, 2023

ಆರಗ ಜ್ಞಾನೇಂದ್ರ ಅವರೇ, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ನಿಮ್ಮ ವಿಫಲ ಸರ್ಕಾರ ಹೊಣೆಯಲ್ಲವೇ? ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ’ ಎಂದು ಕಾಂಗ್ರೆಸ್ ಟೀಕಿಸಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!