dtvkannada

'; } else { echo "Sorry! You are Blocked from seeing the Ads"; } ?>

ಕನಕಪುರ: ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ BJP Karnataka ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಯಿಸಿದ್ದಾರೆ.

ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ?

ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು.

ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ?

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ ಎಂದು ಅವರು ಹೇಳಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!