dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕಳೆದ ಎರಡು ದಿನಗಳಲ್ಲಿ ದೆಹಲಿಯಲ್ಲೇ ಬೀಡುಬಿಟ್ಟು ಮ್ಯಾರಥಾನ್ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಇಂದು(ಏಪ್ರಿಲ್ 06) ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ 100 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸಲು ಬುಧವಾರ ಇಡೀ ದಿನ ನಡೆದ ಕಸರತ್ತಿನ ನಂತರ ಸುಮಾರು 50 ಕ್ಷೇತ್ರಗಳಿಗೆ ಒಂಟಿ ಹೆಸರು ಅಂತಿಮಗೊಳಿಸಿದ್ದು, ಈ ಪಟ್ಟಿಯಲ್ಲಿ ಸಿದ್ದರಾಮಯ್ಯನವರ ಎರಡನೇ ಕ್ಷೇತ್ರ ಇರುತ್ತಾ? ಎನ್ನುವುದು ಕುತೂಹಲ ಮೂಡಿಸಿದೆ.

ಇಂದು ಪಟ್ಟ ಬಿಡುಗಡೆ ಸುಳಿವು ಕೊಟ್ಟ ಡಿಕೆ ಶಿವಕುಮಾರ್;
ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಡಿ.ಕೆ.ಶಿವಕುಮಾರ್, ಸೂರ್ಯ ಉದಯವಾಗುವ ತನಕ ಕಾಯಿರಿ ಎಂದು ಹೇಳಿದ್ದಾರೆ. ಅಂದ್ರೆ ಇಂದು ಬೆಳಗ್ಗೆ ಕಾಂಗ್ರೆಸ್​​​​ ಟಿಕೆಟ್ ಬಿಡುಗಡೆಯಾಗುವ ಸೂಚನೆಯನ್ನು ಡಿಕೆಶಿ ಕೊಟ್ಟಿದ್ದಾರೆ. ಡಿಕೆಶಿ ಬಳಿಕ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಬೆಳಗ್ಗೆ 11 ಗಂಟೆಯೊಳಗೆ ಟಿಕೆಟ್ ರಿಲೀಸ್ ಆಗಲಿದೆ ಎಂದಿದ್ದಾರೆ.

'; } else { echo "Sorry! You are Blocked from seeing the Ads"; } ?>

ಬಾಕಿ ಉಳಿದಿರುವುದರಲ್ಲಿ ಶೇ.50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಎರಡಕ್ಕಿಂತ ಹೆಚ್ಚು ಹೆಸರುಗಳು ಚುನಾವಣಾ ಸಮಿತಿ ಸಭೆ ಮುಂದೆ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರವೇ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರು ಗರಂ ಆಗಿದ್ದರು. ಒಂದು ಅಥವಾ ಎರಡು ಹೆಸರುಗಳಿರುವ ಪಟ್ಟಿಯನ್ನಷ್ಟೇ ಚುನಾವಣಾ ಸಮಿತಿ ಮುಂದೆ ತನ್ನಿ ಎಂದು ಖಡಕ್‌ ಸೂಚನೆ ನೀಡಿದ್ದರು. ಅದರಂತೆ ಮತ್ತೊಮ್ಮೆ ಸಭೆ ಸೇರಿದ ಸ್ಕ್ರೀನಿಂಗ್‌ ಕಮಿಟಿಯು ಎರಡಕ್ಕಿಂತ ಹೆಚ್ಚು ಹೆಸರುಗಳಿರುವ ಕ್ಷೇತ್ರಗಳಲ್ಲಿ ಸಂಭಾವ್ಯರ ಸಂಖ್ಯೆಯನ್ನು ಎರಡಕ್ಕಿಳಿಸುವ ಕಾರ್ಯವನ್ನು ಬುಧವಾರ ಮಧ್ಯಾಹ್ನದ ವೇಳೆಗೆ ಪೂರ್ಣಗೊಳಿಸಿದೆ.

ಆ ಬಳಿಕ ಕಾಂಗ್ರೆಸ್‌ ಚುನಾವಣಾ ಸಮಿತಿಯು ಸಂಜೆ 4.30ರಿಂದ ಸುಮಾರು 2 ಗಂಟೆಗಳ ಕಾಲ ಎರಡನೇ ಪಟ್ಟಿಕುರಿತು ಚರ್ಚೆ ನಡೆಸಿದೆ. ಸದ್ಯಕ್ಕೆ ಸಭೆ ಅಪೂರ್ಣಗೊಂಡಿದ್ದು, ಗುರುವಾರ ಮಧ್ಯಾಹ್ನ 2.30 ವೇಳೆಗೆ ಮತ್ತೆ ಸಮಿತಿ ಸಭೆ ಸೇರಲಿದೆ. ಈ ಸಭೆಯಲ್ಲಿ ತೀವ್ರ ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಮೂಲಗಳ ಪ್ರಕಾರ ಎರಡನೇ ಪಟ್ಟಿಗುರುವಾರ ಬಿಡುಗಡೆಯಾದರೂ ಅನಂತರದ ಪಟ್ಟಿಯೇನಿದ್ದರೂ ಬಿಜೆಪಿಯ ಪಟ್ಟಿ ಪ್ರಕಟವಾದ ನಂತರವೇ ಬಿಡುಗಡೆ ಮಾಡಲು ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಯಾಕಂದ್ರೆ, ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿದ್ದು, ಅವರಿಗಾಗಿ ಟಿಕೆಟ್​ ಕಾಯ್ದಿರಿಸಿದೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕಗ್ಗಂಟು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಅಶೋಕ್ ರೈ ಹಾಗೂ ಹೇಮನಾಥ ಶೆಟ್ಟಿ ನಡುವೆ ತೀವ್ರ ಪೈಪೋಟಿ ಇದೆ. ಮಂಗಳೂರು ಉತ್ತರದಲ್ಲಿ ಮಾಜಿ ಶಾಸಕ ಮೊಯ್ದೀನ್ ಬಾವ ಮತ್ತು ಇನಾಯತ್ ಅಲಿ ಮದ್ಯೆ ಯುದ್ಧ ಶುರುವಾಗಿದೆ.
ತರೀಕೆರೆ ಕ್ಷೇತ್ರದಲ್ಲಿ ಶ್ರೀನಿವಾಸ್ ಹಾಗೂ ಗೋಪಿಕೃಷ್ಣ ನಡುವೆ ಫೈಟ್ ಇದ್ಯಂತೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದಲ್ಲಿ ಆನಂದ್ ಹಾಗೂ ವೈ.ಎಸ್.ವೈ.ದತ್ತಾ ಹೋರಾಡ್ತಿದ್ದಾರೆ. ಚಿಕ್ಕಮಗಳೂರಲ್ಲಿ ಹೆಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡದಂತೆ ಮೂಲ ಕಾಂಗ್ರೆಸಿಗರು ಒತ್ತಡ ಹಾಕ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಲ್ಲಿ ಮಾಜಿ ಸಚಿವೆ ಉಮಾಶ್ರೀ ಹಾಗೂ ಸಿದ್ದುಕೊಣ್ಣೂರ್ ಪೈಪೋಟಿ ಇದೆ. ಹಾಸನ ಜಿಲ್ಲೆಯಲ್ಲಿ ಟಿಕೆಟ್ ಬಡಿದಾಟ ಜೋರಾಗಿದೆ. ಅರಕಲಗೂಡು ಕ್ಷೇತ್ರದಲ್ಲಿ ಶ್ರೀಧರ್ ಗೌಡ ಹಾಗೂ ಕೃಷ್ಟೇಗೌಡ ಮತ್ತು ಬೇಲೂರಿನಲ್ಲಿ ರಾಜಶೇಖರ್ ಮತ್ತು ಗಂಡಸಿ ಶಿವರಾಂ ನಡುವೆ ಫೈಟ್ ನಡೆಯುತ್ತಿದೆ.

ಒಟ್ಟಿನಲ್ಲಿ ಕಾಂಗ್ರೆಸ್ನ ಎರಡನೇ ಪಟ್ಟಿ ತೀವ್ರ ಕುತೂಃಲ ಮೂಡಿಸಿದ್ದು, ಟಿಕೆಟ್ ಯಾರಿಗೆ ಸಿಗುತ್ತೆ ಯಾರಿಗಿಲ್ಲ ಎನ್ನುವುದನ್ನು ಕಾದುನೋಡಬೇಕಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!