ಬಂಟ್ವಾಳ: ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಬಾಲಕನ ಮೃತದೇಹ ತಡರಾತ್ರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ ಘಟನೆ ನಡೆದಿದೆ.
ಮೃತಪಟ್ಟ ಬಾಲಕನನ್ನು ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಎಂದು ತಿಳಿದು ಬಂದಿದೆ.
ಬಾಲಕ ಶನಿವಾರ ಮಧ್ಯಾಹ್ನ ಪಾಣೆಮಂಗಳೂರಿನಲ್ಲಿರುವ ಅಜ್ಜಿ ಮನೆಗೆ ತೆರಳಿದ್ದು ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದ ಬಾಲಕನನ್ನು ಸ್ಥಳೀಯರು ಗಮನಿಸಿದ ಬಗ್ಗೆ ಮಾಹಿತಿ ಬಂದಿತ್ತು ಆದರೆ ಮಧ್ಯಾಹ್ನದ ಬಳಿಕ ಬಾಲಕ ಕಾಣೆಯಾಗಿದ್ದನೆಂದು ತಿಳಿದು ಬಂದಿದೆ.
ಬಾಲಕನ ಕೈಯಲ್ಲಿದ್ದ ಮೊಬೈಲ್ ಗೆ ಪೋಷಕರು ಕರೆ ಮಾಡಿದ್ದು, ಬಾಲಕ ಕರೆ ಸ್ವೀಕರಿಸದ ಕಾರಣ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿದ ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಸಮೀಪ ಬಾಲಕನ ವಸ್ತ್ರ ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ.
ಬಳಿಕ ಕೆರೆಯಲ್ಲಿ ಹುಡುಕಾಡಿದಾಗ ಶವ ಬಾಲಕನ ಶವ ಪತ್ತೆಯಾಗಿದ್ದು ಮಗನ ಮೃತದೇಹ ಕಂಡು ಕುಟುಂಬಸ್ಥರು ದಿಗ್ಭ್ರಮೆಗೊಂಡಿದ್ದಾರೆ