';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಡುಪಿ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಕಳೆದ ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದಂತಹ ಕಾಪು ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್ ರಿಯಾಝ್(27) ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ತಿಳಿದು ಬಂದಿದೆ.
ಕಳೆದ ತಿಂಗಳು ಮಾರ್ಚ್ 25ರಂದು ಜುಬೈಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ರಿಯಾಝ್‌ರವರನ್ನುನ್ನು ಜುಬೈಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಅವರು ಕೊನೆಯುಸಿರೆಳೆದಿದ್ದಾರೆ.ಮೃತ ಯುವಕನು ಹಲವಾರು ಸಮಾಜಮುಖಿ ಕೆಲಸಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದನು ಜೊತೆಗೆ ಹಲವು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದವರಾಗಿದ್ಧರು ಎಂದು ತಿಳಿದು ಬಂದಿದೆ. ಮೃತರು ತಂದೆತಾಯಿ, ಪತ್ನಿಯನ್ನು ಅಗಲಿದ್ದಾರೆ.