dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ನಡೆದಿದ್ದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಈ ಒಂದು ಅಪಘಾತವು ಉಡುಪಿಯಕಲ್ಸಂಕ ಸೇತುವೆ ಬಳಿ ಅಪಘಾತ ಸಂಭವಿಸಿದ್ದು ಗಾಯಗೊಂಡ ವ್ಯಕ್ತಿಯನ್ನು ವಿಜಯಪೂಜಾರಿ (೬೮) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯು ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದು ಉಡುಪಿಯಿಂದ ತನ್ನ ಕೆಲಸಕಾರ್ಯಗಳನ್ನು ಮುಗಿಸಿ ಮನೆ ಕಡೆ ಹೊರಟಿದ್ದಾಗ ಪಡುಬಿದ್ರಿಯ ಕಲ್ಸಂಕ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.

'; } else { echo "Sorry! You are Blocked from seeing the Ads"; } ?>

ಘಟನೆಯಲ್ಲಿ ಸ್ಕೂಟಿ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು ವಾಹನವು ಪಿಕಪಿನ ಮುಂಬಾಗದಿಂದ ಟೈರಿನಡಿಗೆ ಹೊಕ್ಕಿ ಅಲ್ಲಿ ಸಿಲುಕಿಕೊಂಡ ಘಟನೆಯು ಸಂಭವಿಸಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!