ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಎರಡನೇ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದ್ದು ಮತ್ತೆ 12 ಕ್ಷೇತ್ರಗಳ ಪಟ್ಟಿಯನ್ನು ಮುಂದೂಡಲಾಗಿದೆ.
23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಬಿಡುಗಡೆ ಮಾಡಿದೆ.
ಇದರಲ್ಲೂ ಹಾಲಿ 7 ಶಾಸಕರಿಗೆ ಕೋಕ್ ನೀಡಲಾಗಿದೆ.
ಎರಡನೇ ಪಟ್ಟಿಯಲ್ಲಿರುವ ಬಿಜೆಪಿ ಅಭ್ಯರ್ಥಿಗಳ ವಿವರ ಕೆಳಗೆ ನೀಡಲಾಗಿದೆ.
ಮಂಗಳವಾರವಷ್ಟೇ 189 ಕ್ಷೇತ್ರಗಳನ್ನು ಒಳಗೊಂಡ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಸದ್ಯ ಎರಡನೇ ಪಟ್ಟಿಯಲ್ಲಿ 23 ಕ್ಷೇತ್ರಗಳಿಗೆ ಘೋಷಣೆ ಮಾಡಲಾಗಿದ್ದು, 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಗುರುವಾರದೊಳಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕೇವಲ 24 ಗಂಟೆಗಳ ಅಂತರದಲ್ಲಿ ಬಿಜೆಪಿ ಎರಡನೇ ಪಟ್ಟಿ ಘೋಷಣೆ ಮಾಡಲಾಗಿದೆ. ಚನ್ನಗಿರಿಯಲ್ಲಿ ಮಾಡಾಳ್ ಕುಟುಂಬಕ್ಕೆ ಈ ಬಾರಿ ಟಿಕೆಟ್ ನೀಡಿಲ್ಲ. ಬದಲಾಗಿ ಹೊಸ ಅಭ್ಯರ್ಥಿ ಶಿವಕುಮಾರ್ ಅವರಿಗೆ ನೀಡಲಾಗಿದೆ. ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಎದುರು ಇಬ್ಬರು ಹೊಸ ಮುಖಗಳನ್ನೇ ಹಾಕಲಾಗಿದೆ. ದಾವಣಗೆರೆ ದಕ್ಷಿಣಕ್ಕೆ ಅಜಯ್ ಕುಮಾರ್, ದಾವಣಗೆರೆ ಉತ್ತರಕ್ಕೆ ಲೋಕಿಕೆರೆ ನಾಗರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ.
ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡುವ ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರ, ರಾಮದಾಸ್ ಸ್ಪರ್ಧಿಸುವ ಮೈಸೂರಿನ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಉಳಿದಂತೆ ಮೂಡಿಗೆರೆಯಲ್ಲಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಿಲ್ಲ.