dtvkannada

ಸುಳ್ಯ: ದ್ವಿಚಕ್ರ ವಾಹನವೊಂದನ್ನು ಕದ್ದ ಕಳ್ಳನೊಬ್ಬ ಅದನ್ನು ಚಲಾಯಿಸಿ ಚಲಾಯಿಸಿ ಸುಸ್ತಾಗಿ ಹೊಟೇಲ್‌ನ ಶೌಚಾಲಯದಲ್ಲಿ ಮಲಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಒಂದು ಸ್ಕೂಟಿ ಕದ್ದ ಕಥೆಯ ಸಂಪೂರ್ಣ ವಿವರ: ಮಂಡ್ಯ ನಿವಾಸಿ ಸುಲ್ತಾನ್ ಎಂಬಾತ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಸ್ಕೂಟಿ ಕದ್ದು ಬಂದು ಮಂಡ್ಯದತ್ತ ಹೋಗುತ್ತಿದ್ದ ಈ ಸಂದರ್ಭದಲ್ಲಿ ಸುಳ್ಯ ಸಮೀಪದ ಗೂನಡ್ಕದ ದೊಡ್ಡಡ್ಕದಲ್ಲಿರುವ ತಾಜುದ್ದೀನ್ ಟರ್ಲಿ ಎಂಬವರ ಇಂಡಿಯನ್ ಗೇಟ್ ಹೋಟೆಲ್‌ನಲ್ಲಿ ಟೀ ಕುಡಿಯಲೆಂದು ವಾಹನ ನಿಲ್ಲಿಸಿದ್ದಾನೆ ಟೀ ಕುಡಿದ ಬಳಿಕ ಈತ ಶೌಚಾಲಯಕ್ಕೆಂದು ಹೋದವನು ಸುಮಾರು ಅರ್ಧ ಗಂಟೆ ಕಳೆದರೂ ಹೊರಬಾರದಿದ್ದಾಗ ಹೋಟೆಲ್‌ನಲ್ಲಿ ಇದ್ದವರು ಶೌಚಾಲಯದ ಬಾಗಿಲು ಬಡಿದಿದ್ದಾರೆ.

ಆದರೆ ಒಳಗಿನಿಂದ ಯಾವುದೇ ಶಬ್ದ ಬಾರದಿದ್ದಾಗ ಶೌಚಾಲಯದ ಬಾಗಿಲಿನ ಮೇಲ್ಬಾಗದ ರಂಧ್ರದಿಂದ ಇಣುಕಿ ನೋಡಿದ್ದು ಆತ ಕೆಳಗೆ ಬಿದ್ದ ರೀತಿ ಪತ್ತೆಯಾಗಿದ್ದಾನೆ ಗಾಬರಿಗೊಂಡ ಹೋಟೆಲ್‌ನವರು ಆತನ ಮೇಲೆ ನೀರು ಹಾಕಿದ್ದಾರೆ ತಕ್ಷಣ ನಿದ್ದೆಯಿಂದೆದ್ದ ಆತ ಶೌಚಾಲಯದ ಬಾಗಿಲು ತೆಗೆದು ಹೊರಬಂದಿದ್ದಾನೆ.

ಹೋಟೆಲ್‌ನವರು ಆತನನ್ನು ವಿಚಾರಿಸಿದಾಗ ಸಂಶಯಾಸ್ಪದವಾಗಿ ಮಾತನಾಡಿದ್ದು ಅಲ್ಲಿಂದ ಸ್ಕೂಟಿಯಲ್ಲಿ ಮಡಿಕೇರಿ ಕಡೆ ತೆರಳಲು ಪ್ರಯತ್ನಿಸಿದ್ದಾನೆ ಸಂಶಯಗೊಂಡ ಹೋಟೆಲ್‌ನವರು ಕಲ್ಲುಗುಂಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಪೊಲೀಸರು ಆತನನ್ನು ತಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯನ್ನು ಸುಳ್ಯ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಕೋಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅಲ್ಲಿನ ಪೋಲಿಸರು ಸ್ಕೂಟಿ ವಾಹನವೊಂದು ಕಳ್ಳತನವಾಗಿರುವ ದೂರು ದಾಖಲಾಗಿರುವ ಮಾಹಿತಿ ನೀಡಿದ್ದಾರೆ. ಕೂಡಲೇ ಕೋಟಾ ಪೊಲೀಸರು ಸುಳ್ಯಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!