ಸುಳ್ಯ: ಬಸ್ಸು ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿ 6 ಮಂದಿ ಮೃತಪಟ್ಟ ದಾರುಣ ಘಟನೆ ಇದೀಗ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ಸಂಭವಿಸಿದೆ.
ಮೃತಪಟ್ಟವರನ್ನು ಮೂಲತಃ ಮಂಡ್ಯ ನಿವಾಸಿಗಳು ಎಂದು ತಿಳಿದುಬಂದಿದೆ.
ಮಡಿಕೇರಿಯಿಂದ ಮಂಗಳೂರು ಕಡೆ ತೆರಳುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದ ಬಸ್ಸೊಂದು ಢಿಕ್ಕಿ ಹೊಡೆದಿದ್ದು.ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಬಾಕಿ ಮೂವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ ಒಟ್ಟು 8 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಕೆವಿಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಎಂದು ತಿಳಿದು ಬಂದಿದೆ.