dtvkannada

ಪ್ರೇಯಸಿಯ ಹುಟ್ಟುಹಬ್ಬವನ್ನ ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಆಕೆಯ ಕುತ್ತಿಗೆಯನ್ನ ಕೊಯ್ದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ಕೊಲೆಯಾದ ಯುವತಿಯನ್ನು ನವ್ಯ (24) ಎಂದು ಗುರುತಿಸಲಾಗಿದೆ. ಪೊಲೀಸ್ ಇಲಾಖೆಗೆ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿದ್ದ ನವ್ಯ, ಕಳೆದ ಆರು ವರ್ಷಗಳಿಂದ ಪ್ರಶಾಂತ್ ಎಂಬುವವನನ್ನ ಪ್ರೀತಿಸುತ್ತಿದ್ದಳು. ನವ್ಯ ಹಾಗೂ ಪ್ರಶಾಂತ್ ಇಬ್ಬರು ಕನಕಪುರ ಮೂಲದ ದೂರ ಸಂಬಂಧಿಕರು. ಕಳೆದ ಮಂಗಳವಾರ ನವ್ಯ ಬರ್ತಡೇ ಇತ್ತು. ಅಂದು ಬ್ಯುಸಿ ಇದ್ದೇನೆಂದು ಹೇಳಿದ್ದ ಪ್ರಶಾಂತ್ ನಿನ್ನೆ(ಏ.14) ಬರ್ತಡೇ ಸೆಲೆಬ್ರೇಷನ್​ಗೆ ಪ್ಲಾನ್ ಮಾಡಿ ಅದರಂತೆ ರಾತ್ರಿ ಕೇಕ್ ಕಟ್ಟು ಮಾಡಿ ಕೇಕ್‌ ತಿನ್ನಿಸಿದ್ದ. ಬಳಿಕ ಹರಿತವಾದ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ.

ಇನ್ನು ಮೃತ ಯುವತಿಯ ಶವವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಯುವತಿಯ ಮೇಲಿನ ಅನುಮಾನದ ಹುಚ್ಚಿನಿಂದ ಕೊಲೆ ಶಂಕೆ:
ಹೌದು ಇತ್ತೀಚೆಗೆ ಮೃತ ಯುವತಿ ಬೇರೆಯವರ ಜೊತೆ ಚಾಟಿಂಗ್ ಮಾಡುತ್ತಾ ಇದ್ದಳು ಎಂದು ಪ್ರಶಾಂತ್ ಅನುಮಾನಿಸಿದ್ದನಂತೆ. ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಪದೇ ಪದೇ ಜಗಳ ಆಗುತ್ತಿಂತೆ. ಇದೀಗ ಅನುಮಾನದ ಮೇಲೆ ಬರ್ತಡೇ ಆಚರಿಸಿ ಬಳಿಕ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ

By dtv

Leave a Reply

Your email address will not be published. Required fields are marked *

error: Content is protected !!