';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶಾಸಕ ಹಾಗೂ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಶಿರಸಿಯಲ್ಲಿ ಭಾನುವಾರ ವಿಧಾನಭಾಧ್ಯಕ್ಷರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರಾತ್ರಿ ನಡೆಸಿ ನಡೆಸಿದ ಮಾತುಕತೆಯೂ ವಿಫಲವಾದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ.
ನನ್ನ ವಿರುದ್ದ ಷಡ್ಯಂತ್ರ ಮಾಡಿ ಟಿಕೆಟ್ ತಪ್ಪಿಸುವ ಕೆಲಸ ಮಾಡಲಾಗಿದೆ ಎಂದು ಶೆಟ್ಟರ್ ಆರೋಪಿಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಪಕ್ಷೇತರನಾಗಿ ಸ್ಪರ್ಧಿಸಬೇಕೋ ಅಥವಾ ಬೇರೆ ನಿರ್ಧಾರ ಕೈಗೊಳ್ಳಬೇಕೋ ಎಂಬುದರ ಕುರಿತು ಕಾರ್ಯಕರ್ತರ ಅಭಿಪ್ರಾಯ ಪಡೆದು ನಾಳೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.