ಬೆಂಗಳೂರು: ಬಿಜೆಪಿ ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎ. ಐ. ಸಿ.ಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಣದೀಪ್ ಸಿಂಗ್ ಸುಜಿರ್ವಾಲ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ನಾಯಕರು ವಿವಿಧ ರೀತಿಯಲ್ಲಿ ಜಗದೀಶ್ ಶೆಟ್ಟರ ಜೊತೆ ಮಾತುಕತೆ ನಡೆಸಿದರೂ ಅದೆಲ್ಲವೂ ವಿಫಲವಾಗಿದ್ದು ರಾಷ್ಟ್ರಿಯ ಬಿಜೆಪಿಯಲ್ಲಿ ಉನ್ನತ ಸ್ಥಾನ ಮಾನ ನೀಡುವುದಾಗಿಯೂ ಅವರು ಭರವಸೆ ನೀಡಿದ್ದರು.
ಆದರೆ ಬಿಜೆಪಿ ಟಿಕೇಟ್ ನೀಡದೇ ಅವರಿಗೆ ಅನ್ಯಾಯವಸೆಯಿಗಿತ್ತು ಈ ಹಿನ್ನಲೆಯಲ್ಲಿ ಅವರು ತಮ್ಮ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಪಕ್ಷ ಸೇರ್ಪಡೆ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ನಾಯಕರ ಮುಂದೆ ಪ್ರಮುಖ ಮೂರು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಏನೇನು ಬೇಡಿಕೆ ಇಟ್ಟಿದ್ದಾರೆ? ಈ ಕೆಳಗಿನಂತಿದೆ ನೋಡಿ.
ತಮ್ಮ ಆಪ್ತರಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ನಾಯಕರ ಮುಂದೆ ಜಗದೀಶ್ ಶೆಟ್ಟರ್ ಬೇಡಿಕೆ ಇಟ್ಟಿದ್ದಾರೆ. ತಮಗೆ ಹಾಗೂ ತಮ್ಮ ಆಪ್ತರಾದ ಮಾಜಿ ಶಾಸಕ SI ಚಿಕ್ಕನಗೌಡರ್ ತಮ್ಮ ತವನಪ್ಪ ಅಷ್ಟಗಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಕುಂದಗೋಲ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಗೆ ರಾಜೀನಾಮೆ ನೀಡಿರುವ SI ಚಿಕ್ಕನಗೌಡರ್ ಅವರಿಗೆ ಕುಂದಗೋಳ ಕ್ಷೇತ್ರಕ್ಕೆ ಟಿಕೆಟ್ ಕೊಡಿ ಎಂದು ಜಗದೀಶ್ ಶೆಟ್ಟರ್ ಕೇಳಿದ್ದಾರೆ. ಈಗಾಗಲೇ ಕುಂದಗೋಳ ಕ್ಷೇತ್ರಕ್ಕೆ ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಘೋಷಣೆಯಾಗಿದ್ದರೂ ಸಹ ಚಿಕ್ಕನಗೌಡರ ಪರ ಶೆಟ್ಟರ್ ಬ್ಯಾಟಿಂಗ್ ಮಾಡಿದ್ದಾರೆ
ಇನ್ನು ಮತ್ತೊಂದು ಕಡೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ತವನಪ್ಪ ಅಷ್ಟಗಿಗೆ ಟಿಕಟ್ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಜಗದೀಶ್ ಶೆಟ್ಟರ್ ಆಪ್ತರಾಗಿರುವ ತವನಪ್ಪ ಅಷ್ಟಗಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಂದು ಶೆಟ್ಟರ್ ಕಾಂಗ್ರೆಸ್ ನಾಯಕರ ಬಳಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಮತ್ತೊಂದು ಬೇಡಿಕೆ ಅಂದ್ರೆ ತಮಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಟಿಕೆಟ್ ನೀಡಬೇಕೆಂದು ಕೇಳಿದ್ದರು. ಅದರಂತೆ ಇಂದು ಪಕ್ಷ ಸೇರ್ಪಡೆಯಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಬಿ ಫಾರಂ ನೀಡಿದರು.
ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಸುಮಾರು ಐದು ಗಂಟೆಗಳ ಕಾಲ ಜಗದೀಶ್ ಶೆಟ್ಟರ್ ಹಾಗೂ ಕಾಂಗ್ರೆಸ್ ನಾಯಕರು ಸುದೀರ್ಘವಾಗಿ ಮಾತುಕತೆ ಮಾಡಿದ್ದು, ಆ ವೇಳೆ ಈ ಬೇಡಿಕೆಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಸದ್ಯ ಜಗದೀಶ್ ಶೆಟ್ಟರ್ಗೆ ಮಾತ್ರ ಕಾಂಗ್ರೆಸ್ ಟಿಕೆಟ್ ಕನ್ಫರ್ಮ್ ಮಾಡಿ ಅವರ ಬೇಡಿಕೆ ಈಡೇರಿಸಿದ್ದಾರೆ. ಆದ್ರೆ, ಇನ್ನು ಎರಡು ಬೇಡಿಕೆಗೆ ಕಾಂಗ್ರೆಸ್ ಏನು ತೀರ್ಮಾನ ಕೈಗೊಳ್ಳುತ್ತೋ ಎನ್ನುವುದನ್ನು ಕಾದುನೋಡಬೇಕಿದೆ.
ಇದಕ್ಕೂ ಮುನ್ನ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ ಸಿದ್ದಾಂತ ಶೆಟ್ಟರ್ ಗೆ ಗೊತ್ತಿದೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಸ್ವಾಭಿಮಾನ ಕಾಪಾಡಲು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಅಂತ ಹೇಳಿದ್ದಾರೆ. ಶೆಟ್ಟರ್ ಒಬ್ಬ ಸಜ್ಜನ ರಾಜಕಾರಣಿ ಆಗಿದ್ದು, ಬಿಜೆಪಿ ಅವರಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ರಾಹುಲ್ ಗಾಂಧಿ ರಾಜ್ಯದಲ್ಲಿ 150 ಸ್ಥಾನ ಗಳಿಸಬೇಕು ಎಂಬ ಗುರಿ ನೀಡಿದ್ದಾರೆ. ಇದೀಗ ಜಗದೀಶ್ ಶೆಟ್ಟರ್ ಸೇರ್ಪಡೆ ನಂತರ ನಮಗೆ ಅದು ಸುಲಭ ಆಗಲಿದೆ ಅಂತ ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶೆಟ್ಟರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗೋದು ಅನುಮಾನ ಎಂಬುದು ಗೊತ್ತಾಗುತ್ತಿದ್ದಂತೆ ಎರಡ್ಮೂರು ದಿನಗಳಿಂದ ಹೈ ಅಲರ್ಟ್ ಆಗಿದ್ದ ಕಾಂಗ್ರೆಸ್ ನಾಯರು, ಶೆಟ್ಟರ್ ಅವರೊಂದಿಗೆ ಮಾತುಕತೆಯನ್ನು ಆರಂಂಭಿಸಿದ್ದರು. ಲಿಂಗಾಯತ ಸಮುದಾಯದವರೇ ಆದ ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್ ಹಾಗೂ ಇತರೆ ಕೆಲ ನಾಯಕರ ಮೂಲಕ ಶೆಟ್ಟರ್ ಅವರೊಂದಿಗೆ ಮಾತುಕತೆ ನಡೆಸಿ ಪಕ್ಷಕ್ಕೆ ಕರೆತರಲು ಯಶಸ್ವಿಯಾಗಿದ್ದಾರೆ.
224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ 3 ಹಂತಗಳಲ್ಲಿ 209 ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಿದೆ. ಇನ್ನ 15 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.