ಮಂಗಳೂರು: ಸ್ಟೇಟ್‌ಬ್ಯಾಂಕ್ ಬಳಿಯಿರುವ ನೆಹರು ಮೈದಾನದಲ್ಲಿ ವ್ಯಕ್ತಿಯೋರ್ವರು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಕೊಲೆಯಾದ ವ್ಯಕ್ತಿಯನ್ನು ಗುರುತು ಪತ್ತೆಹಚ್ಚಿದ್ದು ಪೊಳಲಿಯ ಅಮ್ಮುಂಜೆ ಬಿಜೆಪಿ ಕಾರ್ಯಕರ್ತರಾಗಿರುವ ಜನಾರ್ದನ (೪೫) ಎಂದು ತಿಳಿದು ಬಂದಿದೆ.
ಪೊಲೀಸರಿಗೆ ಅನಾಮಧೇಯ ಕರೆಯೊಂದು ಬಂದಿದ್ದು ನೆಹರು ಮೈದಾನದಲ್ಲಿ ವ್ಯಕ್ತಿಯೋರ್ವರು ಕೊಲೆಯಾಗಿದ್ದು ಮೃತದೇಹ ಈ ಸ್ಥಳದಲ್ಲಿದೆ ಎಂದು ಕರೆ ಮೂಲಕ ತಿಳಿಸಿದ್ದರು.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ವ್ಯಕ್ತಿಯ ಮೃತದೇಹ ಕಂಡು ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈಯ್ಯಲಾದ ಸ್ಥಿತಿಯಲ್ಲಿ ಕಂಡು ಬಂದಿದೆ.
ಕೊಲೆಯಾದ ವ್ಯಕ್ತಿಯು ಬಿಜೆಪಿ ಕಾರ್ಯಕರ್ತರಾಗಿದ್ದು ವೃತ್ತಿಯಲ್ಲಿ ಡ್ರೈವರ್ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದಿದ್ದು ಈತನನ್ನು ಕೊಲೆಗೈಯ್ಯಲು ಕಾರಣವೆನೆಂದು ಇನ್ನು ತಿಳಿದು ಬಂದಿಲ್ಲ.
ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಪತ್ರಿಕೆಗೆ ತಿಳಿಸಿದ್ದಾರೆ.