ಧರ್ಮದ ಮಧ್ಯೆ ವಿಷಬೀಜ ಭಿತ್ತಿ ರಾಜಕೀಯ ಮಾಡುವ ಬಿಜೆಪಿ ಯವರಿಂದ ಬೇಸತ್ತು ಕಾಂಗ್ರೆಸ್ ಸೇರಿದ್ದೇನೆ- ಅಶೋಕ್ ರೈ
40% ಕಮಿಷನ್ ಪಡೆಯುವ ಬಡ ವಿರೋಧಿ ಬಿಜೆಪಿ ಸರಕಾರಕ್ಕೆ ಈ ಭಾರಿ ತಕ್ಕ ಪಾಠ ಕಲಿಸಬೇಕು- ಭವ್ಯ ನರಸಿಂಹಮೂರ್ತಿ
ಪುತ್ತೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಭಾಗವಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರು ಇಂದು ನಾಮಪತ್ರ ಸಲ್ಲಿಸಿದರು.

ದರ್ಬೆ ವೃತ್ತದಿಂದ ಕಿಲ್ಲೆ ಮೈದಾನದವರೆಗೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳ ಜೊತೆ ಬೃಹತ್ ಮೆರವಣಿಗೆಯಲ್ಲಿ ಸಾಗಿಬಂದು ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯಲ್ಲಿ ಹುಲಿವೇಷ, ಚೆಂಡೆ, ಬ್ಯಾಂಡ್, ರೋಡ್ ಶೋ ದಾರಿಯುದ್ದಕ್ಕೂ ರಂಗು ನೀಡಿತ್ತು. ಮೆರವಣಿಗೆಯ ಬಳಿಕ ಕಿಲ್ಲೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಇತ್ತು. ಕಾಂಗ್ರೆಸ್ ವಕ್ತಾರೆ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಪ್ರಧಾನ ಕಾರ್ಯದರ್ಶಿ ಭವ್ಯ ನರಸಿಂಹಮೂರ್ತಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.



ಬುದ್ದಿವಂತರ ಜಿಲ್ಲೆಯಾದ ದಕ್ಷಿಣ ಕನ್ನಡದ 7 ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲಬೇಕು. ರಾಜ್ಯದ ಅಭಿವೃದ್ದಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ. ಈ ಭಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಈಗಾಗಲೇ ಘೋಷಣೆ ಮಾಡಿದಂತಹ ನಾಲ್ಕು ಗ್ಯಾರಂಟೀ ಯೋಜನೆಗಳನ್ನು ನೀಡಲಿದ್ದು, 40% ಭ್ರಷ್ಟ ಸರಕಾರಕ್ಕೆ ಈ ಭಾರಿ ತಕ್ಕ ಪಾಠ ಕಲಿಸಬೇಕು ಎಂದು ಮತದಾರರಲ್ಲಿ ವಿನಂತಿ ಮಾಡಿದರು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಬಂಡಾರಿ, ಜಿಲ್ಲಾ ನಾಯಕರಾದ ಹರೀಶ್ ಕುಮಾರ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಎಂ.ಎಸ್ ಮಹಮ್ಮದ್,ಅನೀತಾ ಹೇಮನಾಥ್ ಶೆಟ್ಟಿ, ಶ್ರೀಪ್ರಸಾದ್ ಪಾಣಾಜೆ, ಮುರಳಿಧರ್ ರೈ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ಸೇರಿ ಅನೇಕ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.